ADVERTISEMENT

ಎಂಜಿನಿಯರಿಂಗ್‌ ಪದವೀಧರರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಇಂಟರ್ನ್‌ಶಿಪ್

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2020, 7:15 IST
Last Updated 1 ಫೆಬ್ರುವರಿ 2020, 7:15 IST
   

ಬೆಂಗಳೂರು: ನಿರುದ್ಯೋಗ ನಿರ್ಮೂಲನೆಗಾಗಿ ಹೊಸದಾಗಿ ಎಂಜಿನಿಯರಿಂಗ್‌ ಪದವಿ ಪಡೆದವರಿಗೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಈ ಯೋಜನೆಯ ಘೋಷಣೆಯಿಂದಾಗಿ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ದೊರೆಯಲಿದೆ ಎಂದು ಸರ್ಕಾರ ಅಂದಾಜಿಸಿದೆ. ಕೆಲಸ ಹುಡುಕುತ್ತಿರುವ ಎಂಜಿನಿರಿಂಗ್‌ ಪದವೀಧರರಿಗೆ ಇದರಿಂದ ಅನುಕೂಲವಾಗುವುದಲ್ಲದೆ ಸ್ಥಳೀಯ ಯೋಜನೆಗಳಿಗೂ ಮಾನವ ಸಂಪನ್ಮೂಲ ದೊರೆಕಿದಂತಾಗುತ್ತದೆ.

ದೇಶದಲ್ಲಿ ವರ್ಷಕ್ಕೆ ಹತ್ತು ಲಕ್ಷಕ್ಕೂ ಹೆಚ್ಚು ಜನರು ಎಂಜಿನಿರಿಂಗ್‌ ಪದವಿ ಪಡೆದು ಹೊರ ಬರುತ್ತಿದ್ದಾರೆ. ಅವರಿಗೆ ಕೌಶಲ್ಯಭಿವೃದ್ಧಿಯ ಕೊರತೆ ಇದೆ. ಈ ಅಂಶ ಸರ್ಕಾರದ ಗಮನಕ್ಕೆ ಬಂದಿದ್ದು ಐಟಿ ಕಂಪೆನಿಗಳ ಸಹಕಾರದಲ್ಲಿಕೌಶಲ್ಯಭಿವೃದ್ಧಿ ತರಬೇತಿ ನೀಡುವುದಕ್ಕೂ ಸರ್ಕಾರ ಯೋಜನೆ ರೂಪಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.