ADVERTISEMENT

ಅರ್ಹ ಮಧ್ಯಮ ವರ್ಗದವರಿಗಾಗಿ ವಸತಿ ಯೋಜನೆ: ನಿರ್ಮಲಾ ಸೀತಾರಾಮನ್

ಪಿಟಿಐ
Published 1 ಫೆಬ್ರುವರಿ 2024, 6:37 IST
Last Updated 1 ಫೆಬ್ರುವರಿ 2024, 6:37 IST
   

ನವದೆಹಲಿ: ಅರ್ಹ ಮಧ್ಯಮ ವರ್ಗದ ಜನರಿಗಾಗಿ ಮನೆ ಕೊಳ್ಳಲು ಅಥವಾ ಮನೆ ಕಟ್ಟಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ವಸತಿ ಯೋಜನೆ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.

ಸುಸ್ಥಿರ ಅಭಿವೃದ್ಧಿ ಮತ್ತು ಉತ್ಪಾದಕತೆ ಹೆಚ್ಚಿಸುವ ಆರ್ಥಿಕತೆಯನ್ನು ಸರ್ಕಾರ ಅಳವಡಿಸಿಕೊಳ್ಳಲಿದೆ ಎಂದು ಹೇಳಿದರು.

ತಿಂಗಳಿಗೆ 300 ಯೂನಿಟ್‌ಗಳವರೆಗೆ ಒಂದು ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ಅನ್ನು ಖಚಿತಪಡಿಸಲು ಛಾವಣಿಯಲ್ಲಿ ಸೋಲಾರ್ ವಿದ್ಯುತ್ ಪ್ಯಾನಲ್ ಅಳವಡಿಕ ಬಗ್ಗೆ ಅವರು ಪ್ರಸ್ತಾಪಿಸಿದರು. ಇದಕ್ಕೆ ವಾರ್ಷಿಕವಾಗಿ ₹15,000-18,000 ಕೋಟಿ ವೆಚ್ಚವಾಗಲಿದೆ.

ADVERTISEMENT

ಅಸ್ತಿತ್ವದಲ್ಲಿರುವ ಆಸ್ಪತ್ರೆ ಮೂಲಸೌಕರ್ಯಗಳನ್ನು ಬಳಸಿಕೊಂಡು ಸರ್ಕಾರವು ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಿದೆ ಎಂದು ಹಣಕಾಸು ಸಚಿವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.