ADVERTISEMENT

ಚೆನ್ನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲು; ಕೇಂದ್ರದೊಂದಿಗೆ ಸಹಯೋಗ: ಬೊಮ್ಮಾಯಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಮಾರ್ಚ್ 2022, 11:00 IST
Last Updated 4 ಮಾರ್ಚ್ 2022, 11:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಚೆನ್ನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲು ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದೊಂದಿಗೆ ಕೈಜೋಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಚೊಚ್ಚಲ ಬಜೆಟ್ ಮಂಡಿಸಿದ ಬೊಮ್ಮಾಯಿ, ಈ ಕುರಿತು ಮಾಹಿತಿ ನೀಡಿದರು.

ಕೇಂದ್ರ ಸರ್ಕಾರವು 460 ಕಿ.ಮೀ. ಉದ್ದದ ಚೆನ್ನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲು ಕಾರಿಡಾರ್ ಅನ್ನು ನಿರ್ಮಿಸಲು 'ನ್ಯಾಷನಲ್ ಹೈ ಸ್ಪೀಡ್ ರೈಲ್ವೆ ಪ್ರಾಜೆಕ್ಟ್'ರವರಿಂದ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸುತ್ತಿದ್ದು, ಈ ಯೋಜನೆಯ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ಕೈಜೋಡಿಸಲಿದೆ ಎಂದು ತಿಳಿಸಿದ್ದಾರೆ.

ADVERTISEMENT

ರಸ್ತೆ ಮತ್ತು ರೈಲು ಮಾರ್ಗ ಅಭಿವೃದ್ಧಿ:
*ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಂತ-4ರ ಘಟ್ಟ-2ರಡಿ ಒಟ್ಟು 2,275 ಕಿ.ಮೀ. ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 3,500 ಕೋಟಿ ರೂ.
*ಜೀವಿತಾವಧಿ ಮೀರಿ 1,008 ಕಿ.ಮೀ. ಉದ್ದದ ರಾಜ್ಯ ಹದ್ದಾರಿಗಳ ಮರುಡಾಂಬರೀಕರಣಕ್ಕೆ 440 ಕೋಟಿ ರೂ. ಅನುದಾನ
*640 ಕೋಟಿ ಅಂದಾಜು ವೆಚ್ಚದ 55 ಕಿ.ಮೀ. ಉದ್ದದ ಗದಗ-ಯಲವಿಗಿ ನೂತನ ರೈಲು ಮಾರ್ಗ ಯೋಜನೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವಣೆ
*927 ಕೋಟಿ ರೂ. ವೆಚ್ಚದ ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಕ್ರಮ.
*ರಾಷ್ಟ್ರೀಯ ಹೆದ್ದಾರಿ ಅಕ್ಕಪಕ್ಕದಲ್ಲಿರುವ ನದಿಗಳ ಹೊಳೆತ್ತುವಿಕೆ ಮತ್ತು ಹೊಸ ಕೆರೆ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಹಭಾಗಿತ್ವದಲ್ಲಿ ಹೊಸ ಯೋಜನೆ.

ಇವನ್ನೂ ಓದಿ:

Karnataka Budget: ಬೊಮ್ಮಾಯಿ ಬಜೆಟ್‌ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.