ಬೆಂಗಳೂರು: ರಾಜ್ಯದ ಅಭಿವೃದ್ಧಿಗೆ ಸರ್ಕಾರ ಪಂಚಸೂತ್ರಗಳನ್ನು ಅನುಷ್ಠಾನ ಮಾಡಲಿದೆ. ಈ ಮೂಲಕ ಎಲ್ಲ ವರ್ಗದವರ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಪಂಚ ಸೂತ್ರಗಳನ್ನು ಘೋಷಣೆ ಮಾಡಲಾಗಿದೆ.
1) ರಾಜ್ಯದಲ್ಲಿ ಎಲ್ಲರನ್ನೂ ಒಳಗೊಂಡ, ಸಮಗ್ರ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿ ಮಾಡುವುದು.
2) ದುರ್ಬಲ ವರ್ಗದವರ ರಕ್ಷಣೆ ಹಾಗೂ ಏಳಿಗೆಗೆ ಒತ್ತು ನೀಡಲಾಗುವುದು. ಅವರನ್ನು ಪರಾವಲಂಬಿಗಳನ್ನಾಗಿ ಮಾಡದೆ, ಸ್ವಾಭಿಮಾನದ ಬದುಕು ನಡೆಸುವಂತೆ ರೂಪಿಸುವುದು.
3) ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣದ ಕಾರ್ಯಕ್ರಮಗಳನ್ನು ರೂಪಿಸುವುದು ಹಾಗೂ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವುದು.
4) ರಾಜ್ಯದ ಹಿಂದುಳಿದ ಪ್ರದೇಶಗಳನ್ನು ವೈಜ್ಞಾನಿಕವಾಗಿ ಗುರುತಿಸಿ, ವಿವಿಧ ವಲಯಗಳ ಅಭಿವೃದ್ಧಿಗೆ ಸಂಘಟಿತ ಪ್ರಯತ್ನ ಮಾಡುವ ಮೂಲಕ, ಅಲ್ಲಿನ ಮಾನವ ಅಭಿವೃದ್ಧಿ ಸೂಚ್ಯಂಕವನ್ನು ರಾಜ್ಯದ ಸರಾಸರಿಗೆ ಸಮನಾಗಿ ತರುವುದು,
5) ಕೃಷಿ ಕೈಗಾರಿಕೆ ಹಾಗೂ ಸೇವಾ ವಲಯದಲ್ಲಿ ಹೆಚ್ಚಿನ ಪಾಲುದಾರಿಕೆಯೊಂದಿಗೆ ಹೆಚ್ಚಿನ ಅಭಿವೃದ್ಧಿ ಜನ ಸಾಧಿಸಲಾಗುವುದು.
ಹೊಸ ಚಿಂತನೆ, ಹೊಸ ಚೈತನ್ಯ ಹಾಗೂ ಮುನ್ನೋಟದೊಂದಿಗೆ ನವ ಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣ ಮಾಡಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.