ಬೆಂಗಳೂರು: ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳೊಂದಿಗೆ ಸಂಪರ್ಕ ಕಲ್ಪಿಸಲು, ಪ್ರಾದೇಶಿಕ ಅಸಮತೋಲನ ನಿವಾರಿಸಲು ಹಾಗೂ ಕೊನೆಯ ಹಂತದ ಸಂಪರ್ಕ ನೀಡಲು ಕೆಶಿಪ್–4 ಅಡಿಯಲ್ಲಿ 2,943 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿ ನಿರ್ಮಿಸಲು ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲಾಗುವುದು. ಈ ಯೋಜನೆಗೆ ₹ 5 ಸಾವಿರ ಕೋಟಿ ವೆಚ್ಚವಾಗುವ ಅಂದಾಜು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲಾ ಕೇಂದ್ರಗಳಲ್ಲಿ ಸಂಪರ್ಕ ಜಾಲ ವಿಸ್ತರಿಸಲು ಹಾಗೂ ಗ್ರಾಮೀಣ ರಸ್ತೆಗಳಿಗೆ ಸಂಪರ್ಕ ಕಲ್ಪಿಸಲು ಅನುಮೋದನೆಗೊಂಡಿರುವ 5 ಸಾವಿರ ಕಿ.ಮೀ ಉದ್ದದ ಜಿಲ್ಲಾ ಪ್ರಮುಖ ರಸ್ತೆಗಳ ಕಾಮಗಾರಿಗಳಿಗೆ ₹1,500 ಕೋಟಿ ಅನುದಾನವನ್ನು ಬಜೆಟ್‌ನಲ್ಲಿ ಒದಗಿಸಲು ನಿರ್ಧರಿಸಲಾಗಿದೆ.
ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆಗಾಲದಲ್ಲಿ ರಭಸದಿಂದ ಹರಿಯುವ ಹಳ್ಳ ತೊರೆಗಳನ್ನು ಸುರಕ್ಷಿತವಾಗಿ ದಾಟಲು ಹಾಗೂ ಸಂಪರ್ಕರಹಿತ ಜನ ವಸತಿ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲು 500 ಕಾಲುಸಂಕಗಳ ನಿರ್ಮಾಣ
ಕಾಮಗಾರಿಯನ್ನು ₹250 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
ಕೊಡಗು ಜಿಲ್ಲೆಯ ಮುಖ್ಯ ರಸ್ತೆಗಳ ಅಭಿವೃದ್ಧಿಗಾಗಿ ₹100 ಕೋಟಿಯ ವಿಶೇಷ ಪ್ಯಾಕೇಜ್ ನೀಡಲಾಗುವುದು
ರಾಜ್ಯ ಕೋರ್ ನೆಟ್‌ವರ್ಕ್ ರಸ್ತೆ ಜಾಲದಲ್ಲಿ 1,700 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಗಳನ್ನು ‘ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ’ ಯೋಜನೆಯ ಹಂತ–4, ಘಟ್ಟ–3ರ ಅಡಿಯಲ್ಲಿ ₹2 ಸಾವಿರ ಕೋಟಿ ಮೊತ್ತದಲ್ಲಿ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ.
ಬೆಳಗಾವಿ–ಕಿತ್ತೂರು–ಧಾರವಾಡ ರೈಲ್ವೆ ಮಾರ್ಗಕ್ಕೆ ಭೂ ಸ್ವಾಧೀನಕ್ಕಾಗಿ ₹150 ಕೋಟಿಯನ್ನು ಈ ವರ್ಷ ಒದಗಿಸಲು ಸರ್ಕಾರ ಉದ್ದೇಶಿಸಿದೆ.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ
l→₹1.20 ಲಕ್ಷ ಕೋಟಿ ವೆಚ್ಚದಲ್ಲಿ 3,084 ಕಿ.ಮೀ. ಹೆದ್ದಾರಿ ಅಭಿವೃದ್ಧಿ
l→₹5,486 ಕೋಟಿ ವೆಚ್ಚದಲ್ಲಿ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ
l→₹8,408 ಕೋಟಿ ವೆಚ್ಚದಲ್ಲಿ ಬೆಂಗಳೂರು–ರಾಮನಗರ–ಮಂಡ್ಯ–ಮೈಸೂರು ಹೆದ್ದಾರಿ
l→₹4,544 ಕೋಟಿ ವೆಚ್ಚದಲ್ಲಿ ಸೂರತ್–ಚೆನ್ನೈ ಎಕ್ಸ್‌ಪ್ರೆಸ್‌ವೇ
l→₹1,200 ಕೋಟಿ ವೆಚ್ಚದಲ್ಲಿ ಹುಬ್ಬಳ್ಳಿ–ಧಾರವಾಡ ಆರು ಪಥಗಳ ರಸ್ತೆ
l→₹2,200 ಕೋಟಿ ವೆಚ್ಚದಲ್ಲಿ ಹುಬ್ಬಳ್ಳಿ–ಹೊಸಪೇಟೆ–ಬಳ್ಳಾರಿ–ಆಂಧ್ರ ಗಡಿ ಹೆದ್ದಾರಿ
l→₹2,611 ಕೋಟಿ ವೆಚ್ಚದಲ್ಲಿ ಚಿತ್ರದುರ್ಗ–ದಾವಣಗೆರೆ–ಹಾವೇರಿ ಮಾರ್ಗದ ಆರು ಪಥದ ಹೆದ್ದಾರಿ
l→ಮೈಸೂರು–ಕುಶಾಲನಗರ ಮಾರ್ಗದಲ್ಲಿ ₹4,128 ಕೋಟಿ ವೆಚ್ಚದಲ್ಲಿ 92 ಕಿ.ಮೀ. ಉದ್ದದ ಹೆದ್ದಾರಿ ಅಭಿವೃದ್ಧಿ
9 ಕಡೆ ಹೊಸ ಕೈಗಾರಿಕಾ ವಸಾಹತು
ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಕೋಡ್ಕಣಿ, ಬೆಳಗಾವಿಯ ಕಣಗಲಾ, ಚಾಮರಾಜನಗರದ ಬದನಗುಪ್ಪೆ, ಕಲಬುರಗಿಯ ಚಿತ್ತಾಪುರ, ತುಮಕೂರಿನ ಬೈರಗೊಂಡನಹಳ್ಳಿ–ಚಿಕ್ಕನಾಯಕನಹಳ್ಳಿ, ಬೀದರ್‌ನ ಹುಮನಾಬಬಾದ್, ಚಿತ್ರದುರ್ಗದ ಮೊಳಕಾಲ್ಮುರು ಸೇರಿ 9 ಸ್ಥಳಗಳಲ್ಲಿ ಹೊಸದಾಗಿ ಕೈಗಾರಿಕಾ ವಸಹಾತುಗಳ ಸ್ಥಾಪನೆ ಆಗಲಿದೆ.
ಬಹುರಾಷ್ಟ್ರೀಯ ಕಂಪನಿಗಳ ಕಾರ್ಯಾಚರಣೆ
ಯನ್ನು ತ್ವರಿತವಾಗಿ ಪ್ರಾರಂಭಿಸಲು ಕೆಐಎಡಿಬಿ ಸಂಸ್ಥೆಯು ಬೆಂಗಳೂರು ಸುತ್ತಮುತ್ತ ವಿಶ್ವದರ್ಜೆಯ ಪ್ಲಗ್ ಆ್ಯಂಡ್ ಪ್ಲೇ ಕೈಗಾರಿಕಾ ಪಾರ್ಕ್‌ಗಳನ್ನು ಸ್ಥಾಪಿಸಲು ಉದ್ದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.