ಕರ್ನಾಟಕ ಬಜೆಟ್ 2023: ಪ್ರಮುಖ 10 ಅಂಶಗಳು
ಪ್ರಜಾವಾಣಿ ವೆಬ್ ಡೆಸ್ಕ್ Published 17 ಫೆಬ್ರುವರಿ 2023, 10:20 IST Last Updated 17 ಫೆಬ್ರುವರಿ 2023, 10:20 IST ಕರ್ನಾಟಕ ಬಜೆಟ್ 2023: ನೀವು ತಿಳಿದಿರಬೇಕಾದ ಪ್ರಮುಖ 10 ಅಂಶಗಳು
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿದ 2023-24ನೇ ಸಾಲಿನ ಮುಂಗಡಪತ್ರದಲ್ಲಿ ಅಡಕವಾಗಿರುವ ಪ್ರಮುಖ 10 ಅಂಶಗಳು ಇಲ್ಲಿವೆ.
- ರೈತರಿಗೆ ನೀಡಲಾಗುವ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿ ₹3 ಲಕ್ಷದಿಂದ ₹5 ಲಕ್ಷಕ್ಕೆ ಏರಿಕೆ. 25 ಸಾವಿರ ಕೋಟಿ ರೂ. ಸಾಲ ವಿತರಣೆ ಗುರಿ.
- ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ. 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ
- ಹಳ್ಳಿ ಮುತ್ತು ಯೋಜನೆ: ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದಿ, ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾಗುವ 500 ವಿದ್ಯಾರ್ಥಿಗಳ ಸಂಪೂರ್ಣ ಶುಲ್ಕ ಭರಿಸಲು ಕ್ರಮ
- ಮನೆಮನೆಗೆ ಆರೋಗ್ಯ ಕಾರ್ಯಕ್ರಮದಡಿ ಗ್ರಾಮೀಣ ಜನತೆಯ ಸಮಗ್ರ ಆರೋಗ್ಯ ತಪಾಸಣೆಗೆ 2023-24ರಲ್ಲಿ ಎರಡು ಬಾರಿ ಆರೋಗ್ಯ ಶಿಬಿರ ಆಯೋಜನೆ
- ಆರೋಗ್ಯ ಸೇವೆಗಳ ಡಿಜಿಟಲೀಕರಣ. ರೋಗಿಗಳ ಆರೋಗ್ಯ ದಾಖಲೆಗಳ ಸುರಕ್ಷಿತ ಕ್ರೋಡೀಕರಣಕ್ಕೆ ಕ್ರಮ
- ರಾಯಚೂರಿನಲ್ಲಿ ಏಮ್ಸ್ ಮಾದರಿಯ ಆಸ್ಪತ್ರೆ ಹಾಗೂ ಕುಮಟಾದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪನೆ
- ಮಹಿಳಾ ಸಬಲೀಕರಣಕ್ಕೆ ಗೃಹಿಣಿ ಶಕ್ತಿ ಯೋಜನೆ - ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಮಾಸಿಕ ₹500 ಸಹಾಯಧನ. 30 ಲಕ್ಷ ಕಾರ್ಮಿಕ ಮಹಿಳೆಯರಿಗೆ ಉಚಿತ ಬಸ್ ಪಾಸ್ (1000 ಕೋಟಿ)
- ವಿದ್ಯಾವಾಹಿನಿ ಯೋಜನೆಯಡಿ, ಶಾಲಾ ಕಾಲೇಜುಗಳ 8 ಲಕ್ಷ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ (350 ಕೋಟಿ)
- ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ನಿವೃತ್ತಿ ಉಪಧನಕ್ಕಾಗಿ 40 ಕೋಟಿ ಅನುದಾನ; ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಬಿಸಿಯೂಟ ತಯಾರಕಿಯರು, ಆಶಾ ಕಾರ್ಯಕರ್ತೆಯರ ಗೌರವ ಧನ 1 ಸಾವಿರ ರೂ. ಹೆಚ್ಚಳ
- ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿ ಕಾರ್ಯಕ್ರಮದಡಿ ಪ್ರತಿ ಜಿಲ್ಲೆಯಲ್ಲಿ ಜಾನಪದ ಹಬ್ಬ ಆಯೋಜನೆ