ADVERTISEMENT

ಒಕ್ಕೂಟ ವ್ಯವಸ್ಥೆಗೆ ಮಾರಕವಾದ ಎನ್‌ಇಪಿ ಬದಲು, ಉದ್ಯೋಗಾಧಾರಿತ ಹೊಸ ಶಿಕ್ಷಣ ನೀತಿ: ಸಿಎಂ

Karnataka Budget–2023

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಜುಲೈ 2023, 11:00 IST
Last Updated 7 ಜುಲೈ 2023, 11:00 IST
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ   

ಬೆಂಗಳೂರು: ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ ಹಾಗೂ ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ 'ಹೊಸ ಶಿಕ್ಷಣ ನೀತಿ'ಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ಶುಕ್ರವಾರ ರಾಜ್ಯ ಬಜೆಟ್ ಮಂಡಿಸಿದ ಅವರು, 'ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದೆ. ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ' ಎಂದು ಹೇಳಿದ್ದಾರೆ.

ಮುಂದುವರಿದು, 'ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ ಹಾಗೂ ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವುದಕ್ಕಾಗಿ ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣ ನೀಡಲಾಗುವುದು. ಆ ಮೂಲಕ ಯುವಜನರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ನಿಟ್ಟಿನಲ್ಲಿ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು' ಎಂದು ತಿಳಿಸಿದ್ದಾರೆ.

ADVERTISEMENT

Karnataka Budget 2023–Live

ಹೊಸ ಶಿಕ್ಷಣ ನೀತಿಯು, ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡಿರಲಿದೆ ಎಂದೂ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.