ADVERTISEMENT

Karnataka Budget 2024 | ಇನ್ನಷ್ಟು ಉಪನಗರ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2024, 0:30 IST
Last Updated 17 ಫೆಬ್ರುವರಿ 2024, 0:30 IST
   

*ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್‌
ಗಳನ್ನಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

*ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿ ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ₹ 2,000 ಕೋಟಿ ಅನುದಾನ

*ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆ.ಜಿ.ಎಫ್‌, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರ ಸಮೀಪದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್‌ ಅಭಿವೃದ್ಧಿ

ADVERTISEMENT

*ಮೈಸೂರು ನಗರಕ್ಕೆ ಪೆರಿಫೆರಲ್‌ ಹೊರ ವರ್ತುಲ ರಸ್ತೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಅಥವಾ ಟೌನ್‌ ಪ್ಲಾನಿಂಗ್‌ ಮಾದರಿಯಲ್ಲಿ ನಿರ್ಮಿಸಲು ಕಾರ್ಯಸಾಧ್ಯತಾ ವರದಿ ತಯಾರಿ

*ನಗರ ಪ್ರದೇಶದ ಎಲ್ಲ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಅಮೃತ್ 2.0 (ಕೇಂದ್ರ ಪುರಸ್ಕೃತ) ಯೋಜನೆ ಅನುಷ್ಠಾನ. ರಾಜ್ಯದ ಪಾಲಿನ ₹4,615
ಕೋಟಿ ಪೈಕಿ ಕಳೆದ ವರ್ಷ ₹ 320 ಕೋಟಿ ಅನುದಾನ. ಈ ಬಾರಿ ₹ 200 ಕೋಟಿ ಅನುದಾನ ನೀಡಿ, 7.5 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ

*ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಮಿಷನ್ 2.0 ಅಡಿ ದ್ರವ ಹಾಗೂ ಘನ ತ್ಯಾಜ್ಯ ಸಂಸ್ಕರಣೆಗೆ ₹ 5,072 ಕೋಟಿ ವೆಚ್ಚ (ಕೇಂದ್ರ ಸರ್ಕಾರದ ಪಾಲು ₹ 2,185 ಕೋಟಿ).

*ಸ್ಥಳೀಯ ಸಂಸ್ಥೆ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಜಂಟಿ ಸಹಭಾಗಿತ್ವದಲ್ಲಿ ಅಮೃತ್‌ 2.0 ಯೋಜನೆ ಅಡಿ ₹ 539 ಕೋಟಿ ಮೊತ್ತದಲ್ಲಿ ಕೆರೆ ಹಾಗೂ ಜಲ ಮೂಲಗಳ ಪುನಶ್ಚೇತನ, ಉದ್ಯಾನಗಳ ಅಭಿವೃದ್ಧಿ

*ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಯಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದು ಸರಳೀಕರಣಗೊಳಿಸಲು, ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆ.

*ಆಸ್ತಿ ತೆರಿಗೆ ಮತ್ತು ಇತರೆ ಶುಲ್ಕವನ್ನು ಪರಿಣಾಮಕಾರಿಯಾಗಿ ವಸೂಲಿ ಮಾಡಲು ಹಾಗೂ ತೆರಿಗೆ ಸೋರಿಕೆ ತಡೆಗಟ್ಟಲು ’3ಡಿ‘ ಡ್ರೋನ್‌ ತಂತ್ರಜ್ಞಾನ ಬಳಸಿ ಮೌಲ್ಯಮಾಪನ

*ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಿ ಮಾಡಲು ಸ್ಥಳೀಯ ಮಹಿಳಾ ಸ್ವ-ಸಹಾಯ ಗುಂಪುಗಳ ಸಹಕಾರ

*ಒಂದು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಎಲ್ಲ ಸ್ಥಳೀಯ ಯೋಜನಾ ಪ್ರಾಧಿಕಾರಗಳನ್ನು ನಗರಾಭಿವೃದ್ಧಿ ಪ್ರಾಧಿಕಾರಗಳನ್ನಾಗಿ ಉನ್ನತೀಕರಿಸುವ ನಿರ್ಧಾರ

*ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುವ ಸಭೆಗಳ ಕಾರ್ಯ ಕಲಾಪ ನೇರ ಪ್ರಸಾರಕ್ಕೆ ಕ್ರಮ

*ನೇರ ಪಾವತಿ ಅಡಿ ಕಾರ್ಯನಿರ್ವಹಿಸುತ್ತಿರುವ 24,005 ಪೌರಕಾರ್ಮಿಕರನ್ನು ಕಾಯಂಗೊಳಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ. ನೇರ ಪಾವತಿ ಅಡಿಯಲ್ಲಿ ಬಾಕಿ ಉಳಿದಿರುವ ಪೌರಕಾರ್ಮಿಕರನ್ನು ಹಂತ ಹಂತವಾಗಿ ಕಾಯಂಗೊಳಿಸಲು ಕ್ರಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.