ಬೆಂಗಳೂರು: ವಸತಿ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಮ್ಮ ಹಿಂದಿನ ಅವಧಿಯಲ್ಲಿ 14.54 ಲಕ್ಷ ಮನೆಗಳನ್ನು ನಿರ್ಮಿಸಲಾಗಿತ್ತು. 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಸಂಖ್ಯೆ ಕೇವಲ 5.19 ಲಕ್ಷ ಎಂದು ಉಲ್ಲೇಖಿಸಿದ್ದಾರೆ.
ಬಾಕಿ ಉಳಿದಿರುವ 12 ಲಕ್ಷ ಮನೆಗಳ ನಿರ್ಮಾಣದ ಹೊಣೆಗಾರಿಕೆ ನಮ್ಮ ಸರ್ಕಾರದ ಮುಂದಿದೆ ಎಂದು ವಿವರಿಸಿದ್ದಾರೆ.
2023-2024ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಪೂರ್ಣ. 2024-25ರಲ್ಲಿ ಮೂರು ಲಕ್ಷ ಮನೆಗಳ ನಿರ್ಮಾಣದ ಗುರಿ. ರಾಜ್ಯದಲ್ಲಿ ವಸತಿರಹಿತರ ಸಂಖ್ಯೆ ಗುರುತಿಸಲು ಸಮೀಕ್ಷೆ
ಕೊಳೆಗೇರಿ ಅಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಎ.ಎಚ್.ಪಿ.) ಅಡಿ 1,18,359 ಮನೆ ನಿರ್ಮಾಣ. ವಂತಿಗೆ ರೂಪದಲ್ಲಿ ನಿಗದಿ ಮಾಡಿದ್ದ ₹ 5 ಲಕ್ಷದಿಂದ ₹ 1 ಲಕ್ಷಕ್ಕೆ ಇಳಿಕೆ. ಶೀಘ್ರದಲ್ಲೇ 48,796 ಮನೆ ನಿರ್ಮಾಣ ಪೂರ್ಣಗೊಳಿಸಿ ನಿವಾಸಿಗಳಿಗೆ ಹಸ್ತಾಂತರ
ನಗರ ಪ್ರದೇಶದ ಬಡ ನಿವಾಸಿಗಳಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸಲು ಸಂಪನ್ಮೂಲ ಕ್ರೋಡೀಕರಣ
ಆಸ್ತಿ ನಗದೀಕರಣ, ವಸತಿ ಸೆಸ್ ಮತ್ತು ವಿವಿಧ ಶುಲ್ಕ ವಿಧಿಸುವ ಮೂಲಕ ಸಂಪನ್ಮೂಲ ಕ್ರೋಡೀಕರಿಸಿ ’ಕರ್ನಾಟಕ ಕೈಗೆಟಕುವ ವಸತಿ ನಿಧಿ ಸ್ಥಾಪನೆ.
ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್ ದರ ಪರಿಷ್ಕರಣೆ
ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸಂಪನ್ಮೂಲ ಸೃಜಿಸಲು ಕ್ರಮ
ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವು 2023-24 ನೇ ಸಾಲಿನಲ್ಲಿ ಡೆವಲಪರ್‌ಗಳಿಗೆ ₹ 40 ಕೋಟಿ ದಂಡ ವಿಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.