ಬೆಂಗಳೂರು: ಮುಖ್ಯಮಂತ್ರಿ ಹಾಗೂ ರಾಜ್ಯ ಹಣಕಾಸು ಸಚಿವರೂ ಆಗಿರುವ ಯಡಿಯೂರಪ್ಪನವರು ಇಂದು ಮಂಡಿಸಿದ ಬಜೆಟ್‌ನಲ್ಲಿ ಉನ್ನತ ಶಿಕ್ಷಣದ ಅಭಿವೃದ್ದಿಗೆ ಹಲವು ಯೋಜನೆಗಳುಘೋಷಣೆಯಾಗಿವೆ.
ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿರುವ ಅವರು ಜಿಯೋಸ್ಪೇಶಿಯಲ್ ತಂತ್ರಜ್ಞಾನ ಕೇಂದ್ರ ಸ್ಥಾಪನೆ, ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಆಡಳಿತ ವ್ಯವಸ್ಥೆಯ ಸಮರ್ಥ ನಿರ್ವಹಣೆಗೆ ಶಾಶ್ವತ ವ್ಯವಸ್ಥೆ, ತಾಂತ್ರಿಕ ಕಾಲೇಜು ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ.
ರಾಜ್ಯ ಬಜೆಟ್‌ನಲ್ಲಿ ಉನ್ನತ ಶಿಕ್ಷಣಕ್ಕೆ ನೀಡಿರುವುದೇನು?
ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು ಐ.ಐ.ಟಿ. ಮಾದರಿಯಲ್ಲಿ ಸ್ವಾಯತ್ತಗೊಳಿಸಿ ಅಭಿವೃದ್ಧಿಪಡಿಸಲು 10 ಕೋಟಿ ರೂ. ಅನುದಾನ.
ತಂತ್ರಜ್ಞಾನದ ನೆರವಿನಿಂದ ರಾಜ್ಯದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಆಡಳಿತ ವ್ಯವಸ್ಥೆಯ ಸಮರ್ಥ ನಿರ್ವಹಣೆಗೆ ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ಶಾಶ್ವತ ವ್ಯವಸ್ಥೆ.
ಇಂಟರ್ಯಾಕ್ಟೀವ್ ಆನ್-ಲೈನ್ ಕೋರ್ಸ್‍ಗಳನ್ನು (M.O.O.C) ಪ್ರಾರಂಭ ಹಾಗೂ ಗುಣಾತ್ಮಕ ಇ-ಕಂಟೆಂಟ್ ಅಭಿವೃದ್ಧಿಗೆ ಒಂದು ಕೋಟಿ ರೂ. ವೆಚ್ಚ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿ ತಲಾ ಐದು ಕೋಟಿ ರೂ. ವೆಚ್ಚದಲ್ಲಿ ಜಿಯೋಸ್ಪೇಶಿಯಲ್ ತಂತ್ರಜ್ಞಾನ ಕೇಂದ್ರ ಸ್ಥಾಪನೆ.
ಏಷ್ಯಾ ಖಂಡದ ದೇಶಗಳ ಶಿಕ್ಷಣ ಸಚಿವರ ಶೈಕ್ಷಣಿಕ ಸಮಾವೇಶ ಮತ್ತು ಬೃಹತ್ ವಸ್ತು ಪ್ರದರ್ಶನ ಆಯೋಜನೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.