ಬೆಂಗಳೂರು: ಮುಂಜಾನೆ 1 ಗಂಟೆವರೆಗೆ ಬೆಂಗಳೂರಿನಲ್ಲಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರು ಹಾಗೂ 10 ಮಹಾನಗರ ಪಾಲಿಕೆಗಳಲ್ಲಿ ವ್ಯಾಪಾರ-ವಹಿವಾಟಿನ ಮೇಲಿನ ನಿರ್ಬಂಧವನ್ನು ಬೆಳಗಿನ ಜಾವ ಒಂದು ಗಂಟೆಯವರೆಗೆ ವಿಸ್ತರಿಸಲು ಉದ್ದೇಶಿಸಲಾಗಿದೆ.
ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್‌ಗಳನ್ನಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.
ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿ ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ₹ 2,000 ಕೋಟಿ ಅನುದಾನ
ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆ.ಜಿ.ಎಫ್, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರ ಸಮೀಪದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್ ಅಭಿವೃದ್ಧಿ
ಮೈಸೂರು ನಗರಕ್ಕೆ ಪೆರಿಫೆರಲ್ ಹೊರ ವರ್ತುಲ ರಸ್ತೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಅಥವಾ ಟೌನ್ ಪ್ಲಾನಿಂಗ್ ಮಾದರಿಯಲ್ಲಿ ನಿರ್ಮಿಸಲು ಕಾರ್ಯಸಾಧ್ಯತಾ ವರದಿ ತಯಾರಿ
ನಗರ ಪ್ರದೇಶದ ಎಲ್ಲ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಅಮೃತ್ 2.0 (ಕೇಂದ್ರ ಪುರಸ್ಕೃತ) ಯೋಜನೆ ಅನುಷ್ಠಾನ. ರಾಜ್ಯದ ಪಾಲಿನ ₹ 4,615 ಕೋಟಿ ಪೈಕಿ ಕಳೆದ ವರ್ಷ ₹ 320 ಕೋಟಿ ಅನುದಾನ. ಈ ಬಾರಿ ₹ 200 ಕೋಟಿ ಅನುದಾನ ನೀಡಿ, 7.5 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ
ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಮಿಷನ್ 2.0 ಅಡಿ ದ್ರವ ಹಾಗೂ ಘನ ತ್ಯಾಜ್ಯ ಸಂಸ್ಕರಣೆಗೆ ₹ 5,072 ಕೋಟಿ ವೆಚ್ಚ (ಕೇಂದ್ರ ಸರ್ಕಾರದ ಪಾಲು ₹ 2,185 ಕೋಟಿ).
ಸ್ಥಳೀಯ ಸಂಸ್ಥೆ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಜಂಟಿ ಸಹಭಾಗಿತ್ವದಲ್ಲಿ ಅಮೃತ್ 2.0 ಯೋಜನೆ ಅಡಿ ₹ 539 ಕೋಟಿ ಮೊತ್ತದಲ್ಲಿ ಕೆರೆ ಹಾಗೂ ಜಲ ಮೂಲಗಳ ಪುನಶ್ಚೇತನ, ಉದ್ಯಾನಗಳ ಅಭಿವೃದ್ಧಿ
ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಯಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದು ಸರಳೀಕರಣಗೊಳಿಸಲು, ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆ.
ಆಸ್ತಿ ತೆರಿಗೆ ಮತ್ತು ಇತರೆ ಶುಲ್ಕವನ್ನು ಪರಿಣಾಮಕಾರಿಯಾಗಿ ವಸೂಲಿ ಮಾಡಲು ಹಾಗೂ ತೆರಿಗೆ ಸೋರಿಕೆ ತಡೆಗಟ್ಟಲು ’3ಡಿ‘ ಡ್ರೋನ್ ತಂತ್ರಜ್ಞಾನ ಬಳಸಿ ಮೌಲ್ಯಮಾಪನ
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಿ ಮಾಡಲು ಸ್ಥಳೀಯ ಮಹಿಳಾ ಸ್ವ-ಸಹಾಯ ಗುಂಪುಗಳ ಸಹಕಾರ
ಒಂದು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಎಲ್ಲ ಸ್ಥಳೀಯ ಯೋಜನಾ ಪ್ರಾಧಿಕಾರಗಳನ್ನು ನಗರಾಭಿವೃದ್ಧಿ ಪ್ರಾಧಿಕಾರಗಳನ್ನಾಗಿ ಉನ್ನತೀಕರಿಸುವ ನಿರ್ಧಾರ
ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುವ ಸಭೆಗಳ ಕಾರ್ಯ ಕಲಾಪ ನೇರ ಪ್ರಸಾರಕ್ಕೆ ಕ್ರಮ
ಮೈಸೂರಿನ ಪ್ರಖ್ಯಾತ ಲ್ಯಾನ್ಸ್‌ಡೌನ್ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಯನ್ನು ಪಾರಂಪರಿಕ ಶೈಲಿಯಲ್ಲಿಯೇ ಅಭಿವೃದ್ಧಿಪಡಿಸಲು ಕ್ರಮ
ಕೊಳೆಗೇರಿ ಜನರಿಗೆ ಮನೆ, ಸೆಸ್ ಪರಿಷ್ಕರಣೆ
2023-2024ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಪೂರ್ಣ. 2024-25ರಲ್ಲಿ ಮೂರು ಲಕ್ಷ ಮನೆಗಳ ನಿರ್ಮಾಣದ ಗುರಿ. ರಾಜ್ಯದಲ್ಲಿ ವಸತಿರಹಿತರ ಸಂಖ್ಯೆ ಗುರುತಿಸಲು ಸಮೀಕ್ಷೆ
ಕೊಳೆಗೇರಿ ಅಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಎ.ಎಚ್.ಪಿ.) ಅಡಿ 1,18,359 ಮನೆ ನಿರ್ಮಾಣ. ವಂತಿಗೆ ರೂಪದಲ್ಲಿ ನಿಗದಿ ಮಾಡಿದ್ದ ₹ 5 ಲಕ್ಷದಿಂದ ₹ 1 ಲಕ್ಷಕ್ಕೆ ಇಳಿಕೆ. ಶೀಘ್ರದಲ್ಲೇ 48,796 ಮನೆ ನಿರ್ಮಾಣ ಪೂರ್ಣಗೊಳಿಸಿ ನಿವಾಸಿಗಳಿಗೆ ಹಸ್ತಾಂತರ
ನಗರ ಪ್ರದೇಶದ ಬಡ ನಿವಾಸಿಗಳಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸಲು ಸಂಪನ್ಮೂಲ ಕ್ರೋಡೀಕರಣ
ಆಸ್ತಿ ನಗದೀಕರಣ, ವಸತಿ ಸೆಸ್ ಮತ್ತು ವಿವಿಧ ಶುಲ್ಕ ವಿಧಿಸುವ ಮೂಲಕ ಸಂಪನ್ಮೂಲ ಕ್ರೋಡೀಕರಿಸಿ ’ಕರ್ನಾಟಕ ಕೈಗೆಟಕುವ ವಸತಿ ನಿಧಿ(ಕೆಎಎಚ್‌ಎಫ್) ಸ್ಥಾಪನೆ.
ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್ ದರ ಪರಿಷ್ಕರಣೆ
ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸಂಪನ್ಮೂಲ ಸೃಜಿಸಲು ಕ್ರಮ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.