ಬೆಂಗಳೂರು: 2021–22ನೇ ಸಾಲಿನ ರಾಜ್ಯ ಬಜೆಟ್‌ಅನ್ನು ಮಾರ್ಚ್ 5ರಂದು ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ.
ಅದಕ್ಕೂ ಮೊದಲು ಎರಡು ದಿನ, ಅಂದರೆ, ಮಾರ್ಚ್ 3 ಮತ್ತು 4ರಂದು ವಿಧಾನಮಂಡಲದ ಉಭಯ ಸದನಗಳಲ್ಲಿ ‘ಒಂದು ದೇಶ– ಒಂದು ಚುನಾವಣೆ’ ವಿಷಯದ ಕುರಿತು ಚರ್ಚೆ ನಡೆಸಲು ಉದ್ದೇಶಿಸಲಾಗಿದೆ. ಮಾರ್ಚ್ 8ರಿಂದ 31ರವರೆಗೆ ಬಜೆಟ್ ಮೇಲೆ ಇಲಾಖಾವಾರು ಚರ್ಚೆ ನಡೆಸಲು ತಾತ್ಕಾಲಿಕವಾಗಿ ದಿನ ನಿಗದಿಪಡಿಸಲಾಗಿದೆ’ ಎಂದು ಸಂಸದೀಯ ವ್ಯವಹಾರಗಳ ಇಲಾಖೆ ಮೂಲಗಳು ತಿಳಿಸಿವೆ.
ಈಗಾಗಾಲೇ ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿವಿಧ ಇಲಾಖೆ
ಗಳ ಸಚಿವರು ಮತ್ತು ಅಧಿಕಾರಿ ಗಳ ಜತೆ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.