ಬೆಂಗಳೂರು: ಭಕ್ತರ ಬಹುಕಾಲದ ಬೇಡಿಕೆಯಂತೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ ನೀಡಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಮೂಲಕ ದೇಗುಲಗಳೇ ತನ್ನ ಅಭಿವೃದ್ಧಿ ಕಾಮಗಾರಿಗಳ ಕುರಿತು ನಿರ್ಧಾರ ಕೈಗೊಳ್ಳಲು ಸಾಧ್ಯವಾಗುವಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿರುವ ದೇವಾಲಯಗಳ ಅಭಿವೃದ್ಧಿಗೆ 2021-22ನೇ ಸಾಲಿನಲ್ಲಿ ₹ 168 ಕೋಟಿ ಮೊತ್ತದ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ₹ 25 ಕೋಟಿ ವೆಚ್ಚ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳ ಅರ್ಚಕರ ಮತ್ತು ನೌಕರರಿಗೆ ನೆರವಾಗಲು ತಸ್ತೀಕ್ ಮೊತ್ತವನ್ನು ₹ 48 ಸಾವಿರದಿಂದ ₹ 60 ಸಾವಿರಕ್ಕೆ ಹೆಚ್ಚಿಸಲಾಗುವುದು. ಭಕ್ತರಿಗೆ ಆನ್‌ಲೈನ್ ಮೂಲಕವೇ ವಿವಿಧ ಸೇವೆಗಳನ್ನು ಒದಗಿಸಲು ಸಂಯೋಜಿತ ದೇವಾಲಯ ನಿರ್ವಹಣಾ ವ್ಯವಸ್ಥೆ (Integrated Temple Management System) ತಂತ್ರಾಂಶವನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.
ಮಹಾರಾಷ್ಟ್ರದ ಪಂಡರಾಪುರಕ್ಕೆ ರಾಜ್ಯದಿಂದ ಭೇಟಿ ನೀಡುವ ಭಕ್ತರಿಗಾಗಿ ಅತಿಥಿ ಗೃಹವನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.
ಇನ್ನಷ್ಟು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.