ಕೇಂದ್ರ ಬಜೆಟ್‌ಗೆ ಸಂಬಂಧಿಸಿದ ಎಲ್ಲ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ...
ಸ್ಟಾರ್ಟ್‌ಅಪ್‌ಗಳ ನಷ್ಟದ ಪರಿಹಾರವನ್ನು 10 ವರ್ಷಗಳವರೆಗೆ ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ.
ಪ್ರಯೋಗಾಲಯದಲ್ಲಿ ಬೆಳೆದ ಹವಳಕ್ಕೆ ಬಳಸಲಾಗುವ ಬೀಜಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲು ಸರ್ಕಾರ ನಿರ್ಧರಿಸಿದೆ.
ತಾಮ್ರದ ತ್ಯಾಜದ ಮೇಲಿನ ಶೇ 2.5 ರಿಯಾಯಿತಿಯ ಮೂಲ ಕಸ್ಟಮ್ಸ್ ಸುಂಕವನ್ನು ಸರ್ಕಾರ ಮುಂದುವರಿಸಲಿದೆ.
ರಫ್ತು ಉತ್ತೇಜಿಸಲು ಸೀಗಡಿ ಆಹಾರದ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲು ಸರ್ಕಾರ ತೀರ್ಮಾನಿಸಿದೆ.
ಸಿಗರೇಟ್ ಮೇಲಿನ ತೆರಿಗೆಯನ್ನು ಶೇ 16ಕ್ಕೆ ಹೆಚ್ಚಿಸಲಾಗಿದೆ.
ರಬ್ಬರ್ ಮೇಲಿನ ಮೂಲ ಆಮದು ಸುಂಕವನ್ನು 10 ಪಿಸಿಯಿಂದ 25 ಪಿಸಿಗೆ ಹೆಚ್ಚಿಸಲಾಗಿದೆ.
ಚಿನ್ನದಿಂದ ತಯಾರಿಸಿದ ವಸ್ತುಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಹೆಚ್ಚಿಸಲಾಗಿದೆ.
ಅಡುಗೆಮನೆಯ ಎಲೆಕ್ಟ್ರಿಕ್ ಚಿಮಣಿ ಮೇಲಿನ ಕಸ್ಟಮ್ಸ್ ಸುಂಕ ಶೇ 7.5 ರಿಂದ ಶೇ 15ಕ್ಕೆ ಏರಿಕೆ
ಮೊಬೈಲ್ ಫೋನ್ ಉತ್ಪಾದನೆಯು 2014-15ರಲ್ಲಿ 5.8 ಕೋಟಿ ಯುನಿಟ್‌ಗಳಿಂದ ಕಳೆದ ಹಣಕಾಸು ವರ್ಷದಲ್ಲಿ 31 ಕೋಟಿ ಯೂನಿಟ್‌ಗಳಿಗೆ ಏರಿಕೆಯಾಗಿದೆ
ಟಿವಿ ಪ್ಯಾನಲ್‌ಗಳ ತೆರೆದ ಸೆಲ್‌ಗಳ ಭಾಗಗಳ ಮೇಲಿನ ಕಸ್ಟಮ್ಸ್ ಸುಂಕ ಶೇ. 2.5ಕ್ಕೆ ಇಳಿಕೆ.
ಮೊಬೈಲ್ ಫೋನ್ ತಯಾರಿಕೆಗೆ ಬೇಕಾದ ವಸ್ತುಗಳ ಮೇಲಿನ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲು ಸರ್ಕಾರ ತೀರ್ಮಾನಿಸಿದೆ.
‘ಇವಿ’ಗಳನ್ನು ಪ್ರೋತ್ಸಾಹಿಸಲು ಹೆಚ್ಚಿಸಲು ಪರೋಕ್ಷ ತೆರಿಗೆಯನ್ನು ಪ್ರಸ್ತಾಪಿಸಲಾಗಿದೆ.
ಮುಂದಿನ ಹಣಕಾಸು ವರ್ಷಕ್ಕೆ 23.3 ಲಕ್ಷ ಕೋಟಿ ರೂಪಾಯಿ ತೆರಿಗೆ ಸ್ವೀಕೃತಿ ಲೆಕ್ಕಾಚಾರ
– ನಿರ್ಮಲಾ ಸೀತಾರಾಮಾನ್
‘ಕಂಪನಿ ಕಾಯ್ದೆ’ಯಡಿ ಅರ್ಜಿಗಳನ್ನು ಸಲ್ಲಿಸುವ ಕಂಪನಿಗಳಿಗೆ ತ್ವರಿತವಾಗಿ ಸ್ಪಂದಿಸಲು ‘ಸಂಸ್ಕರಣಾ ಕೇಂದ್ರ’ವನ್ನು ಸ್ಥಾಪಿಸಲಾಗುವುದು
ಸಾಲದ ಹರಿವನ್ನು ಸುಗಮಗೊಳಿಸಲು, ಆರ್ಥಿಕ ಸ್ಥಿರತೆಯನ್ನು ಉತ್ತೇಜಿಸಲು ರಾಷ್ಟ್ರೀಯ ಹಣಕಾಸು ಮಾಹಿತಿ ನೋಂದಣಿ ಕೇಂದ್ರವನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ.
ಕ್ಲೈಮ್ ಮಾಡದ ಷೇರುಗಳು ಮತ್ತು ಡಿವಿಡೆಂಡ್‌ಗಳನ್ನು ಮರುಪಡೆಯಲು ‘ಇಂಟಿಗ್ರೇಟೆಡ್ ಐಟಿ ಪೋರ್ಟಲ್’ ಅನ್ನು ಸ್ಥಾಪಿಸಲಾಗುವುದು.
ಶೇ 7.5 ಬಡ್ಡಿಯೊಂದಿಗೆ ಗರಿಷ್ಠ 2 ಲಕ್ಷ ರೂ.ವರೆಗೆ ಠೇವಣಿ ಇಡಲು ‘ಮಹಿಳಾ ಸಮ್ಮಾನ್’ ಉಳಿತಾಯ ಪ್ರಮಾಣಪತ್ರದ ಅಡಿಯಲ್ಲಿ ಅವಕಾಶ ಕಲ್ಪಿಸಲಾಗುತ್ತದೆ. ಇದನ್ನು 2025ರ ವರೆಗೆ ವಿಸ್ತರಿಸಲಾಗುತ್ತದೆ.
–ನಿರ್ಮಲಾ ಸೀತಾರಾಮನ್
ಹಣಕಾಸು ವಲಯದ ನಿಯಂತ್ರಕರಿಗೆ ಅಸ್ತಿತ್ವದಲ್ಲಿರುವ ನಿಯಮಗಳನ್ನು ಸಮಗ್ರವಾಗಿ ಮರುಪರಿಶೀಲನೆ ಮಾಡುವಂತೆ ತಿಳಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ದೇಶೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸರ್ಕಾರವು ‘ದೇಖೋ ಅಪ್ನಾ ದೇಶ್’ ಉಪಕ್ರಮವನ್ನು ಪ್ರಾರಂಭಿಸಲಿದೆ
ಎಂಎಸ್‌ಎಂಇಗಳಿಗೆ ಪರಿಷ್ಕೃತ ಸಾಲ ಖಾತ್ರಿ ಯೋಜನೆಯನ್ನು ಏಪ್ರಿಲ್ 1 ರಿಂದ ಪ್ರಾರಂಭಿಸಲಾಗುವುದು
'ಒಂದು ಜಿಲ್ಲೆ ಒಂದು ಉತ್ಪನ್ನ' ವಸ್ತುಗಳು ಮತ್ತು ಜಿಐ ಉತ್ಪನ್ನಗಳ ಪ್ರಚಾರ ಮತ್ತು ಮಾರಾಟಕ್ಕಾಗಿ ಯೂನಿಟಿ ಮಾಲ್ ಸ್ಥಾಪಿಸಲು ರಾಜ್ಯ ಸರ್ಕಾರಗಳಿಗೆ ಉತ್ತೇಜಿನ ನೀಡಲಾಗುತ್ತದೆ.
ಯುವಕರ ಕೌಶಲ್ಯ ತರಬೇತಿಗಾಗಿ ‘ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ 4.0’ ಅನ್ನು ಪ್ರಾರಂಭಿಸಲಾಗುವುದು
ಪ್ರವಾಸೋದ್ಯಮವನ್ನು ಉತ್ತೇಜಿಸಲು 'ಚಾಲೆಂಜ್ ಮೋಡ್' ಮೂಲಕ 50 ಸ್ಥಳಗಳನ್ನು ಆಯ್ಕೆ ಮಾಡಲು ಸರ್ಕಾರ ನಿರ್ಧರಿಸಿದೆ.
ಪರ್ಯಾಯ ರಸಗೊಬ್ಬರಗಳನ್ನು ಬಳಸುವಂತೆ ರಾಜ್ಯಗಳನ್ನು ಉತ್ತೇಜಿಸಲು PM-PRANAM ಎಂಬ ಕಾರ್ಯಕ್ರಮ ಜಾರಿಗೆ ತರಲಾಗುತ್ತದೆ.
ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳಲು 1 ಕೋಟಿ ರೈತರಿಗೆ ಸರ್ಕಾರ ನೆರವು ನೀಡಲಿದೆ.
ಕರಾವಳಿಯುದ್ದಕ್ಕೂ ಮ್ಯಾಂಗ್ರೋವ್ ಕಾಡುಗಳನ್ನು ಬೆಳಸಲು ಸರ್ಕಾರ ಪ್ರೋತ್ಸಾಹ ನೀಡಲಿದೆ.
ಪರಿಸರ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ‘ಗ್ರೀನ್ ಕ್ರೆಡಿಟ್’ ಎಂಬ ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತದೆ. ಕಂಪನಿಗಳಿಂದ ಪರಿಸರ ಸಂರಕ್ಷಣೆ ಕ್ರಮಗಳನ್ನು ಉತ್ತೇಜಿಸಲು ಈ ಯೋಜನೆ ಕಾರ್ಯಗತಗೊಳಿಸಲಾಗುತ್ತಿದೆ.
– ನಿರ್ಮಲಾ ಸೀತಾರಾಮನ್
ವಾಣಿಜ್ಯ ವಿವಾದಗಳ ಇತ್ಯರ್ಥಕ್ಕೆ ‘ವಿವಾದ್ ಸೆ ವಿಶ್ವಾಸ-2’ ಅಡಿಯಲ್ಲಿ ಮತ್ತೊಂದು ‘ವಿವಾದ ಪರಿಹಾರ ಕಾರ್ಯಕ್ರಮ’ವೊಂದನ್ನು ಜಾರಿಗೆ ತರಲು ಸರ್ಕಾರ ತೀರ್ಮಾನ: ಸೀತಾರಾಮನ್
ಸಾರಿಗೆ ಮೂಲಸೌಕರ್ಯಕ್ಕೆ ಸಂಬಂಧಿಸಿದ 100 ನಿರ್ಣಾಯಕ ಯೋಜನೆಗಳನ್ನು ಅನುಷ್ಠಾನಕ್ಕಾಗಿ ಗುರುತಿಸಲಾಗಿದೆ– ನಿರ್ಮಲಾ
ನಿರ್ದಿಷ್ಟಪಡಿಸಿದ ಸರ್ಕಾರಿ ಏಜೆನ್ಸಿಗಳ ಎಲ್ಲಾ ಡಿಜಿಟಲ್ ವ್ಯವಸ್ಥೆಗಳಿಗೆ ಸಾಮಾನ್ಯ ಗುರುತು ಚೀಟಿಯಾಗಿ ಪ್ಯಾನ್ (PAN) ಅನ್ನು ಬಳಸಲಾಗುವುದು.
ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯ ಮಾದರಿಯಲ್ಲಿ ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿಯನ್ನು ರಚಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ವರ್ಷಕ್ಕೆ ₹10 ಸಾವಿರ ಕೋಟಿ ನೀಡಲು ತೀರ್ಮಾನಿಸಲಾಗಿದೆ.
– ನಿರ್ಮಲಾ ಸೀತಾರಾಮನ್
ಮುಂದಿನ ಹಣಕಾಸು ವರ್ಷದಲ್ಲಿ ರೈಲ್ವೆ ಇಲಾಖೆಯಲ್ಲಿ ₹2.40 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡಲಾಗುವುದ ಎಂದು ನಿರ್ಮಲಾ ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಆವಾಸ್ ಯೋಜನೆಯ ವೆಚ್ಚವನ್ನು ಶೇ 66ಕ್ಕೆ (₹79,000 ಕೋಟಿ) ಹೆಚ್ಚಿಸಲಾಗಿದೆ.
3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸುತ್ತಿರುವ 740 ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಕೇಂದ್ರ ಸರ್ಕಾರವು ಮುಂದಿನ ಮೂರು ವರ್ಷಗಳಲ್ಲಿ 38,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಿದೆ.
– ನಿರ್ಮಲಾ ಸೀತಾರಾಮನ್
ಬರಪೀಡಿತ ಪ್ರದೇಶಗಳಲ್ಲಿ ಸುಸ್ಥಿರ ಸೂಕ್ಷ್ಮ ನೀರಾವರಿ ಒದಗಿಸುವ ಗುರಿಯನ್ನು ಹೊಂದಿರುವ ಭದ್ರಾ ಮೇಲ್ಡಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳ ಕೇಂದ್ರ ನೆರವು ನೀಡಲಾಗುವುದು.
– ನಿರ್ಮಲಾ ಸೀತಾರಾಮನ್
2014ರ ನಂತರ ಆರಂಭವಾಗಿರುವ 157 ವೈದ್ಯಕೀಯ ಕಾಲೇಜುಗಳಲ್ಲಿ 157 ಹೊಸ ನರ್ಸಿಂಗ್ ಕಾಲೇಜು ಆರಂಭಿಸಲಾಗುವುದು.
– ವಿತ್ತ ಸಚಿವೆ
ಭಾರತೀಯ ಸಿರಿಧಾನ್ಯ ಸಂಶೋಧನಾ ಸಂಸ್ಥೆಗೆ ಉತ್ತೇಜನ ನೀಡಲಾಗುವುದು: ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ
ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಒತ್ತು ನೀಡಲಾಗುವುದು. ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿಗೆ ಹೆಚ್ಚಿಸಲಾಗುವುದು: ಎಫ್‌ಎಂ ಸೀತಾರಾಮನ್
ಯುವ ಉದ್ಯಮಿಗಳು ಕೃಷಿ-ಸ್ಟಾರ್ಟ್‌ಅಪ್‌ಗಳನ್ನು ಆರಂಭಿಸಲು ಉತ್ತೇಜಕ ಕ್ರಮವಾಗಿ ಕೃಷಿ ವೇಗವರ್ಧಕ ನಿಧಿಯನ್ನು ಸ್ಥಾಪಿಸಲಾಗುವುದು
ರಾಜ್ಯಗಳ ಸಕ್ರಿಯ ಭಾಗವಹಿಸುವಿಕೆ, ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಪ್ರವಾಸೋದ್ಯಮಕ್ಕೆ ಉತ್ತೇನ ನೀಡಲಾಗುವುದು.
– ನಿರ್ಮಲಾ ಸೀತಾರಾಮನ್
ಎಲ್ಲಾ ನಾಗರಿಕರಿಗೆ ಉತ್ತಮ ಗುಣಮಟ್ಟದ ಮತ್ತು ಘನತೆಯ ಬದುಕನ್ನು ಖಾತ್ರಿಪಡಿಸಲು 2014 ರಿಂದ ಸರ್ಕಾರದ ಪ್ರಯತ್ನಿಸಿದೆ. ತಲಾ ಆದಾಯವು ದುಪ್ಪಟ್ಟಾಗಿ ₹1.97 ಲಕ್ಷಕ್ಕೆ ಏರಿದೆ. ಈ 9 ವರ್ಷಗಳಲ್ಲಿ, ಭಾರತದ ಆರ್ಥಿಕತೆಯು 10ರಿಂದ 5ನೇ ಸ್ಥಾನಕ್ಕೆ ಏರಿದೆ.
– ನಿರ್ಮಲಾ ಸೀತಾರಾಮನ್
ಜಾಗತಿಕ ಸವಾಲುಗಳ ಈ ಸಮಯದಲ್ಲಿ, ಭಾರತವು ಜಿ 20 ಅಧ್ಯಕ್ಷ ಸ್ಥಾನ ಪಡೆದುಕೊಂಡಿದೆ. ಇದು, ವಿಶ್ವದ ಆರ್ಥಿಕತೆಯಲ್ಲಿ ಭಾರತದ ಪಾತ್ರವನ್ನು ಬಲಪಡಿಸಲು ನಮಗೆ ಅನನ್ಯ ಅವಕಾಶವಾಗಿದೆ.
ಇದು ಅಮೃತಕಾಲದ ಮೊದಲ ಬಜೆಟ್.
ಭಾರತದ ಆರ್ಥಿಕತೆ ಸರಿದಾರಿಯಲ್ಲಿದೆ. ಉಜ್ವಲ ಭವಿಷ್ಯದತ್ತ ಸಾಗುತ್ತಿದೆ.
ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂಬ ಉದ್ದೇಶದೊಂದಿಗೆ 28 ತಿಂಗಳ ಕಾಲ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ಪೂರೈಸಲಾಗಿದೆ.
– ನಿರ್ಮಲಾ ಸೀತಾರಾಮನ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಬಜೆಟ್ ಮಂಡನೆ ಆರಂಭಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.