ನವದೆಹಲಿ: ಸರ್ಕಾರದಿಂದ ಬಡವರಿಗೆ ಉಚಿತ ಅಡುಗೆ ಅನಿಲ ವಿತರಿಸುವ ‘ಉಜ್ವಲ‘ ಯೋಜನೆಯನ್ನು ಒಂದು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ವಿಸ್ತರಿಸುತ್ತಿರುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
‘ವಾಹನಗಳಿಗೆ ಸಿಎನ್‌ಜಿ ಮತ್ತು ಕೊಳವೆ ಮೂಲಕ ಮನೆಗಳಿಗೆ ಅಡುಗೆ ಅನಿಲವನ್ನು ಪೂರೈಸುವ ನಗರ ಅನಿಲ ವಿತರಣಾ ಜಾಲವನ್ನು ಇನ್ನೂ 100 ಜಿಲ್ಲೆಗಳಿಗೆ ವಿಸ್ತರಿಸಲಾಗುವುದು‘ ಎಂದು ಹೇಳಿದ್ದಾರೆ.
ಅನಿಲ ಆಧಾರಿತ ಆರ್ಥಿಕತೆಯನ್ನು ಹೆಚ್ಚಿಸಲು ಕೊಳವೆಗಳ ಮೂಲಕ ಅನಿಲ ಪೂರೈಸುವ ಸಾಮರ್ಥ್ಯವನ್ನು ನಿಯಂತ್ರಿಸುವುದಕ್ಕಾಗಿ ಸಾಗಣೆ ವ್ಯವಸ್ಥೆ ಆಪರೇಟರ್ (ಟಿಎಸ್‌ಒ) ಅನ್ನು ಘೋಷಿಸಿದರು.
‘ದೇಶದಲ್ಲಿ ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲೂ ಇಂಧನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಲಿಲ್ಲ‘ ಎಂದು ಉಲ್ಲೇಖಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.