ADVERTISEMENT

Union Budget 2021: ಬೆಂಗಳೂರು ಮೆಟ್ರೋ ಯೋಜನೆಗೆ ₹14,788 ಕೋಟಿ ಘೋಷಣೆ

ಏಜೆನ್ಸೀಸ್
Published 1 ಫೆಬ್ರುವರಿ 2021, 7:17 IST
Last Updated 1 ಫೆಬ್ರುವರಿ 2021, 7:17 IST
ಸಂಸತ್ತಿನಲ್ಲಿ ಬಜೆಟ್ ಮಂಡಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಸಂಸತ್ತಿನಲ್ಲಿ ಬಜೆಟ್ ಮಂಡಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್   

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ 2021–22ನೇ ಹಣಕಾಸು ವರ್ಷದ ಬಜೆಟ್ ಮಂಡಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಬೆಂಗಳೂರುನಮ್ಮ ಮೆಟ್ರೋ ರೈಲು ಯೋಜನೆಗೆ ಬರೋಬ್ಬರಿ 14,788 ಕೋಟಿ ರೂ.ಗಳನ್ನು ಘೋಷಣೆ ಮಾಡಿದ್ದಾರೆ.

ಬೆಂಗಳೂರು ಮೆಟ್ರೋ ವ್ಯಾಪ್ತಿಯನ್ನು ಮತ್ತಷ್ಟು 58.19 ಕಿ.ಮೀ. ದೂರ ವಿಸ್ತರಿಸಲು ಈ ಅನುದಾನಘೋಷಿಸಲಾಗಿದೆ.

ಕೇಂದ್ರ ಬಜೆಟ್ 2021 ಲೈವ್ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ಕಿಸಿ

ADVERTISEMENT

ಕೇಂದ್ರ ಬಜೆಟ್ 2021 ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಈ ಮಹತ್ವದ ಘೋಷಣೆ ಮಾಡಿದರು.

ಇದೇ ಮೊದಲ ಬಾರಿಗೆ ಕಾಗದರಹಿತ ಡಿಜಿಟಲ್ ಬಜೆಟ್ ಮಂಡಿಸಲಾಗುತ್ತಿದೆ. ಬಜೆಟ್ ಪ್ರತಿಗಳನ್ನು ಮುದ್ರಿಸಲಾಗುತ್ತಿಲ್ಲ. ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಯ ಬಳಿಕ ಸಾಫ್ಟ್ ಕಾಪಿಗಳನ್ನು ಸಂಸದರಿಗೆ ಹಂಚಲಾಗುವುದು. ಸಾರ್ವಜನಿಕರು ಆ್ಯಪ್ ಮೂಲಕವೂ ಬಜೆಟ್ ಪ್ರತಿಗಳನ್ನು ಡೌನ್‌ಲೋಡ್ ಮಾಡಬಹುದಾಗಿದೆ.

ಕೇಂದ್ರ ಬಜೆಟ್ 2021 ವಿಶೇಷ ಪುಟಕ್ಕಾಗಿ ಇಲ್ಲಿ ಕ್ಲಿಕ್ಕಿಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.