ನವದೆಹಲಿ: ಏಪ್ರಿಲ್‌ನಲ್ಲಿ ಆರಂಭವಾಗಲಿರುವ ಮುಂದಿನ ಹಣಕಾಸು ವರ್ಷದಲ್ಲಿ ದೇಶವು ಶೇ 8ರಿಂದ 8.5 ರಷ್ಟು ಆರ್ಥಿಕ ಬೆಳವಣಿಗೆ ಸಾಧಿಸಬಹುದು ಎಂದು ಆರ್ಥಿಕ ಸಮೀಕ್ಷೆ ಅಂದಾಜಿಸಿದೆ.
ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಸಂಸತ್‌ನಲ್ಲಿ ಮಂಗಳವಾರ ಮಂಡನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್‌ನಲ್ಲಿ ಆರ್ಥಿಕ ಸಮೀಕ್ಷಾ ವರದಿಯನ್ನು ಮಂಡಿಸಿದರು.
ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ 9.2 ರಷ್ಟು ಆರ್ಥಿಕ ಬೆಳವಣಿಗೆ ಅಂದಾಜಿಸಲಾಗಿತ್ತು. ಆದರೆ ಮುಂದಿನ ವರ್ಷದ ಆರ್ಥಿಕ ಬೆಳವಣಿಗೆ ಪ್ರಮಾಣ ಇದಕ್ಕಿಂತ ಕಡಿಮೆಯಾಗಿರಲಿದೆ.
ಕೃಷಿ ಮತ್ತು ಕೈಗಾರಿಕಾ ಉತ್ಪಾದನೆಗಳಲ್ಲಿನ ಬೆಳವಣಿಗೆಗಳಿಂದಾಗಿ ದೇಶದ ಆರ್ಥಿಕತೆಯು ಸದ್ಯ ಸವಾಲುಗಳನ್ನು ಎದುರಿಸಲು ಸಿದ್ಧವಾಗಿರುವುದು ಕಂಡುಬಂದಿದೆ ಎಂದು ಸಮೀಕ್ಷಾ ವರದಿಯಲ್ಲಿ ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.