ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಅನ್ನು 'ಕುರ್ಚಿ ಉಳಿಸಿ ಬಜೆಟ್' ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
'ಈ ಬಜೆಟ್ ಇತರೆ ರಾಜ್ಯಗಳ ವೆಚ್ಚದಲ್ಲಿ ಬಿಜೆಪಿ ಮಿತ್ರಪಕ್ಷಗಳಿಗೆ 'ಪೊಳ್ಳು ಭರವಸೆ'ಗಳನ್ನು ನೀಡಿದೆ' ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
'2024ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಣಾಳಿಕೆ ಹಾಗೂ ಹಿಂದಿನ ಬಜೆಟ್‌ಗಳ 'ಕಾಪಿ-ಪೇಸ್ಟ್' ಬಜೆಟ್ ಇದಾಗಿದೆ' ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ.
'ತಮ್ಮ ನಿಕಟವರ್ತಿಗಳನ್ನು ತೃಪ್ತಿಪಡಿಸುವ ಬಜೆಟ್ ಇದಾಗಿದ್ದು, ಜನ ಸಾಮಾನ್ಯರಿಗೆ ಯಾವುದೇ ಪ್ರಯೋಜನವಿಲ್ಲ' ಎಂದು ಹೇಳಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ದಾಖಲೆಯ ಸತತ 7ನೇ ಬಜೆಟ್‌ನಲ್ಲಿ, ಬಿಹಾರ ಹಾಗೂ ಆಂಧ್ರಪ್ರದೇಶಕ್ಕೆ ಹೆಚ್ಚಿನ ಅನುದಾನ ಘೋಷಿಸಿದ್ದರು. ಎನ್‌ಡಿಎ ಒಕ್ಕೂಟದ ಮಿತ್ರ ಪಕ್ಷಗಳಾದ ಜೆಡಿಯು ಬಿಹಾರದಲ್ಲಿ ಮತ್ತು ಟಿಡಿಪಿ ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.