ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ 2024ರಲ್ಲಿ ನಗರಾಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ದೇಶದ ಆಯ್ದ ನಗರಗಳಲ್ಲಿ 'ಸ್ಟ್ರೀಟ್ ಫುಡ್ ಹಬ್' ತೆರೆಯುವುದಾಗಿ ತಿಳಿಸಿದ್ದಾರೆ.
ಆಯ್ದ ನಗರಗಳಲ್ಲಿ 100 ವಾರದ ಸಂತೆ ಅಥವಾ ಸ್ಟ್ರೀಟ್ ಫುಡ್ ಹಬ್ ಬೆಂಬಲಿಸುವ ಯೋಜನೆ ಕುರಿತು ಅವರು ಪ್ರಸ್ತಾಪಿಸಿದ್ದಾರೆ.
ಆ ಮೂಲಕ 'ಪಿಎಂ ಸ್ವನಿಧಿ' ಯೋಜನೆಯ ಅಡಿಯಲ್ಲಿ ಬೀದಿ ವ್ಯಾಪಾರಿಗಳ ಜೀವನ ಮಟ್ಟ ಸುಧಾರಣೆಗೆ ಆದ್ಯತೆ ಕೊಡಲಾಗಿದೆ.
ಸರ್ಕಾರಿ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಕೈಗಾರಿಕಾ ಕಾರ್ಮಿಕರಿಗೆ ಬಾಡಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
30 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶದ 14 ದೊಡ್ಡ ನಗರಗಳ ಅಭಿವೃದ್ಧಿ ಯೋಜನೆಯ ಕುರಿತು ಅವರು ಪ್ರಸ್ತಾಪ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.