ADVERTISEMENT

ದೇಶಕ್ಕಾಗಿ ಅಲ್ಲ; ಬಿಹಾರ, ಆಂಧ್ರಕ್ಕಾಗಿ ಬಜೆಟ್‌ ಮಂಡನೆ: NCPಯ ಶರದ್ ಪವಾರ್ ಬಣ

ಪಿಟಿಐ
Published 23 ಜುಲೈ 2024, 10:03 IST
Last Updated 23 ಜುಲೈ 2024, 10:03 IST
<div class="paragraphs"><p>ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌</p></div>

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

   

ಮುಂಬೈ: ‘ಎನ್‌ಡಿಎ ಪ್ರಮುಖ ಪಕ್ಷಗಳಾದ ಜೆಡಿಯು ಮತ್ತು ಟಿಡಿಪಿ ಆಡಳಿತವಿರುವ ಬಿಹಾರ ಹಾಗೂ ಆಂಧ್ರಪ್ರದೇಶ ರಾಜ್ಯಗಳ ಅನುಕೂಲಕ್ಕಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಿದ್ದಾರೆ. ದೇಶಕ್ಕಾಗಿ ಅಲ್ಲ’ ಎಂದು ಎನ್‌ಸಿಪಿಯ ಶರದ್ ಪವಾರ್ ಬಣ ಹೇಳಿದೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಎನ್‌ಸಿಪಿ ಶರದ್ ಪವಾರ್ ಬಣದ ವಕ್ತಾರ ಕ್ಲೈಡ್ ಕ್ರಾಸ್ಟೊ ‘ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಮಹಾರಾಷ್ಟ್ರವನ್ನು ನಿರ್ಲಕ್ಷಿಸಲಾಗಿದೆ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಗೆ ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ’ ಎಂದು ಹೇಳಿದ್ದಾರೆ.

ADVERTISEMENT

‘ನಿರ್ಮಲಾ ಸೀತಾರಾಮನ್‌, ಬಿಹಾರ ಮತ್ತು ಆಂಧ್ರಪ್ರದೇಶಕ್ಕಾಗಿ ಮಾತ್ರ ಬಜೆಟ್‌ ಮಂಡಿಸಿದ್ದೀರಾ? ಕೇಂದ್ರ ಬಜೆಟ್‌ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಅನುಕೂಲಕರವಾಗಿಲ್ಲದಿದ್ದರೆ, ಅವರ ಸರ್ಕಾರ ಬೀಳುತ್ತದೆ ಎಂಬುದು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ತಿಳಿದಿದೆ. ಆದ್ದರಿಂದಲೇ, ಸೀತಾರಾಮನ್‌ ಅವರು ಎನ್‌ಡಿಎ ಅನುಕೂಲಕ್ಕಾಗಿ ಮಾತ್ರ ಬಜೆಟ್‌ ಮಂಡಿಸಿದ್ದಾರೆ. ದೇಶಕ್ಕಾಗಿ ಅಲ್ಲ’ ಎಂದು ವಾಗ್ದಳಿ ನಡೆಸಿದ್ದಾರೆ.

ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಎನ್‌ಡಿಎ ಸರ್ಕಾರದ ಪ್ರಮುಖ ಪಕ್ಷಗಳಾದ ಜೆಡಿಯು ಹಾಗೂ ಟಿಡಿಪಿ ಆಡಳಿತವಿರುವ ಬಿಹಾರ ಹಾಗೂ ಆಂಧ್ರಪ್ರದೇಶ ರಾಜ್ಯಗಳಿಗೆ ವಿಶೇಷ ಯೋಜನೆಗಳನ್ನು ಮಂಜೂರು ಮಾಡಲಾಗಿದೆ. ಬಿಹಾರದ ವಿವಿಧ ರಸ್ತೆ ಕಾಮಗಾರಿಗಳಿಗೆ ₹26 ಸಾವಿರ ಕೋಟಿ, ಹೊಸ ವಿಮಾನ ನಿಲ್ದಾಣಕ್ಕೆ ಅನುದಾನ. ಆಂಧ್ರಪ್ರದೇಶಕ್ಕೆ ವಿಶೇಷ ಕಾರಿಡಾರ್‌ ರಸ್ತೆ ನಿರ್ಮಾಣಕ್ಕೆ ಅನುದಾನ ಮೂಲಕ ಬಂಪರ್ ಕೊಡುಗೆ ನೀಡಿದೆ.

ಬಿಹಾರ, ಜಾರ್ಖಂಡ್‌ , ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ‘ಪೂರ್ವೋದಯ’ ಎಂಬ ಯೋಜನೆಯನ್ನು ಘೋಷಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.