ADVERTISEMENT

Union Budget | 2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರ: ನಿರ್ಮಲಾ

ಪಿಟಿಐ
Published 1 ಫೆಬ್ರುವರಿ 2024, 5:55 IST
Last Updated 1 ಫೆಬ್ರುವರಿ 2024, 5:55 IST
<div class="paragraphs"><p>ನಿರ್ಮಲಾ ಸೀತಾರಾಮನ್‌</p></div>

ನಿರ್ಮಲಾ ಸೀತಾರಾಮನ್‌

   

(ಪಿಟಿಐ ಚಿತ್ರ)

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಲೋಕಸಭೆಯಲ್ಲಿ 2024–25ನೇ ಹಣಕಾಸು ವರ್ಷದ ಕೇಂದ್ರದ ಮಧ್ಯಂತರ ಬಜೆಟ್‌ ಅನ್ನು ಮಂಡಿಸುತ್ತಿದ್ದಾರೆ.

ADVERTISEMENT

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಬಜೆಟ್ ಮಂಡನೆಯ ಭಾಷಣದಲ್ಲಿ ಪ್ರತಿಪಾದಿಸಿದ್ದಾರೆ.

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 25 ಕೋಟಿ ಜನರು ಬಹುಆಯಾಮದ ಬಡತನದಿಂದ ಮುಕ್ತಿ ಪಡೆದಿದ್ದಾರೆ ಎಂದು ಅವರು ಉಲ್ಲೇಖ ಮಾಡಿದ್ದಾರೆ.

80 ಕೋಟಿ ಜನರಿಗೆ ಉಚಿತ ರೇಷನ್ ನೀಡುವ ಮೂಲಕ ಆಹಾರದ ಕಳವಳ ನಿವಾರಣೆಯಾಗಿದೆ ಎಂದು ಅವರು ಹೇಳಿದ್ದಾರೆ.

ಅನ್ನದಾತರಿಗೆ (ರೈತರು) ಕನಿಷ್ಠ ಬೆಂಬಲ ಬೆಲೆಯನ್ನು ಅಗತ್ಯಕ್ಕೆ ತಕ್ಕಂತೆ ನಿಯಮಿತವಾಗಿ ವೃದ್ಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಅನೇಕ ಸಮಸ್ಯೆಗಳನ್ನು ಎದುರಿಸಿತ್ತು. ಈ ಎಲ್ಲ ಸವಾಲುಗಳನ್ನು ಸರ್ಕಾರವು ಸಮರ್ಥವಾಗಿ ನಿಭಾಯಿಸಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.