ನವದೆಹಲಿ: 2022–23ನೇ ಸಾಲಿನಲ್ಲಿ ಪ್ರಧಾನಮಂತ್ರಿ ಅವಾಸ್ ಯೋಜನಾ ಅಡಿಯಲ್ಲಿ 80 ಲಕ್ಷ ಮನೆಗಳನ್ನು ವಿತರಿಸಲಾಗುತ್ತದೆ ಎಂದು ಬಜೆಟ್‌ನಲ್ಲಿ ಹೇಳಲಾಗಿದೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ 2022–203ನೇ ಸಾಲಿನ ಆಯವ್ಯಯ ಮಂಡಿಸಿದರು. ಬಜೆಟ್ ಭಾಷಣದಲ್ಲಿ ಅವರು ಈ ವಿಷಯವನ್ನು ಘೋಷಿಸಿದ್ದಾರೆ.
‘ಪ್ರಧಾನಮಂತ್ರಿ ಆವಾಸ್ ಯೋಜನೆಯ ಅಡಿ, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅರ್ಹ ಫಲಾನುಭವಿಗಳಿಗೆ ನೀಡಲೆಂದು 80 ಲಕ್ಷ ಮನೆಗಳನ್ನು ನಿರ್ಮಿಸಲಾಗುತ್ತದೆ. ಇದಕ್ಕಾಗಿ ಬಜೆಟ್‌ನಲ್ಲಿ ₹48,000 ಕೋಟಿ ನೀಡಲಾಗುತ್ತಿದೆ’ ಎಂದು ಅವರು ತಿಳಿಸಿದರು.
ನಗರ ಪ್ರದೇಶದ ಆರ್ಥಿಕ ದುರ್ಬಲರ ವಸತಿ ಯೋಜನೆಗಳಿಗೆ ಸಂಬಂಧಿಸಿದ ಅನುಮತಿಯನ್ನು ಅತಿಶೀಘ್ರವಾಗಿ ಒದಗಿಸಿಕೊಡಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳೊಂದಿಗೆ ಕೆಲಸ ಮಾಡಲಿದೆ ಎಂದೂ ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ಉಲ್ಲೇಖಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.