ಮಂಗಳೂರು: ಈಗಾಗಲೇ ಬಿಡುಗಡೆಗೊಂಡಿರುವ ₹ 100 ಮುಖಬೆಲೆಯ ಸ್ವಚ್ಛವಾದ ಹೊಸ ಸರಣಿಯ ನೋಟುಗಳು ಜನರ ಕೈಯಲ್ಲಿರುವಂತೆ ಮಾಡುವ ಉದ್ದೇಶ ಹೊಂದಿರುವ ಭಾರತೀಯ ರಿಸರ್ವ್ ಬ್ಯಾಂಕ್ ಹಳೇ ಸರಣಿಯ ಎಲ್ಲಾ ನೋಟುಗಳನ್ನು ಹಿಂಪಡೆಯುವ ನಿರ್ಧಾರಕ್ಕೆ ಬಂದಿದೆ ಎಂದು ಆರ್‌ಬಿಐ ಸಹಾಯಕ ಮಹಾಪ್ರಬಂಧಕ ಬಿ.ಎಂ.ಮಹೇಶ್ ತಿಳಿಸಿದರು.
‘ಹಳೆಯ ನೋಟುಗಳಂತೆ ಕಾಣುವ ಖೋಟಾ ನೋಟುಗಳು ಹೆಚ್ಚಾಗಿರುವುದರಿಂದ ₹ 100ರ ಮುಖಬೆಲೆಯ ಹಳೆಯ ಸರಣಿಯ ನೋಟುಗಳನ್ನು ಹಿಂಪಡೆಯಲಾಗುತ್ತಿದೆ ಎಂದರು. ಹಳೆಯ ಸೀರೀಸ್ ಹೊಂದಿರುವ ₹ 100ರ ಕರೆನ್ಸಿ ನೋಟುಗಳನ್ನು ಮಾರ್ಚ್ ಅಂತ್ಯದ ವೇಳೆಗೆ ಸಂಪೂರ್ಣವಾಗಿ ಹಿಂಪಡೆಯುವ ನಿರ್ಧಾರಕ್ಕೆ ಬರಲಾಗಿದೆ. ಕಳೆದ ಆರು ವರ್ಷಗಳಿಂದ ಈ ನೋಟುಗಳು ಮುದ್ರಣವಾಗುತ್ತಿಲ್ಲ. ಚಲಾವಣೆಯಲ್ಲಿರುವ ಹಳೆಯ ನೋಟುಗಳನ್ನು ಹಂತ ಹಂತವಾಗಿ ಹಿಂಪಡೆಯುತ್ತ ಬರಲಾಗಿದೆ’ ಎಂದರು.
‘ಜನತೆ ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ. ಇದು ಡಿಮಾನಿಟೈಸೇಷನ್ ಅಲ್ಲ.ಹೊಸ ಸೀರೀಸ್ ಹೊಂದಿರುವ ₹ 100ರ ಮುಖಬೆಲೆಯ ನೋಟುಗಳು ಮಾತ್ರ ಚಲಾವಣೆಯಲ್ಲಿರಬೇಕು. ಬ್ಯಾಂಕ್‌ನವರು ಅಂತಹ ನೋಟುಗಳನ್ನು ಇಟ್ಟುಕೊಳ್ಳದೇ, ಕರೆನ್ಸಿ ಚೆಸ್ಟ್‌ಗೆ ಒಪ್ಪಿಸಬೇಕು’ ಎಂದು ಸೂಚನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.