ನವದೆಹಲಿ:2022ರ ವೇಳೆಗೆ ಎಲ್ಲರಿಗೂ ಮನೆ ಎಂಬ ಕನಸು ಸಾಕಾರಗೊಳ್ಳಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
2022ರ ಆರ್ಥಿಕ ವರ್ಷದೊಳಗೆಪ್ರಧಾನ ಮಂತ್ರಿ ಆವಾಸ್ ಯೋಜನೆ (ವಸತಿ ಯೋಜನೆ)ಯಡಿಯಲ್ಲಿ 1.95 ಕೋಟಿ ಮನೆಗಳನ್ನು ನಿರ್ಮಿಸಲಾಗುವುದು.ಅದೇ ವೇಳೆ ಗ್ರಾಮೀಣ ಪ್ರದೇಶದಲ್ಲಿರುವ ಪ್ರತೀ ಮನೆಗಳಿಗೆ ವಿದ್ಯುತ್ ಸಂಪರ್ಕ ಮತ್ತು ಗ್ಯಾಸ್ ಸಂಪರ್ಕ ಒದಗಿಸಲಾಗುವುದು.
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ 1.25 ಲಕ್ಷ ಕಿಮೀ ರಸ್ತೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು.ಈ ಯೋಜನೆಗಾಗಿ ₹80, 250 ಕೋಟಿ ವ್ಯಯಿಸಲಾಗುವುದು ಎಂದು ಬಜೆಟ್‌ನಲ್ಲಿ ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.