ಮುಂಬೈ: ಗ್ರಾಮೀಣ ಪ್ರದೇಶದಲ್ಲಿ ಸುಸ್ಥಿರ ಕೃಷಿಗೆ ಉತ್ತೇಜನ ನೀಡುವ ಜೊತೆಗೆ ರೈತರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರದ ಜೊತೆಗೆ, 3ಎಫ್ ಆಯಿಲ್ ಪಾಮ್ ಕಂಪನಿಯು ಒಪ್ಪಂದ ಮಾಡಿಕೊಂಡಿದೆ.
ಕಂಪನಿ ಹಾಗೂ ಕರ್ನಾಟಕದ ತೋಟಗಾರಿಕೆ ಇಲಾಖೆಯು ಈ ಕುರಿತು ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಿವೆ.
ಈ ಪಾಲುದಾರಿಕೆಯಡಿ ರೈತರಿಗೆ ಸುಧಾರಿತ ಕೃಷಿ ತಂತ್ರಜ್ಞಾನ ಒದಗಿಸಲಾಗುವುದು. ತರಬೇತಿ ಕಾರ್ಯಕ್ರಮ ಮತ್ತು ಉತ್ಪಾದನೆ ಹೆಚ್ಚಿಸಲು ಅಗತ್ಯ ಸಂಪನ್ಮೂಲಗಳನ್ನು ಒದಗಿಸಲಾಗುವುದು ಎಂದು ಕಂಪನಿಯು ತಿಳಿಸಿದೆ.
ರಾಜ್ಯದಲ್ಲಿ ಅಡುಗೆ ಎಣ್ಣೆ ಉತ್ಪಾದನೆಯ ಹೆಚ್ಚಳಕ್ಕೆ ಒತ್ತು ನೀಡಲಾಗುವುದು. ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ತಾಳೆ ಬೆಳೆಗಾರರಿಗೆ ಈ ಕೃಷಿ ಮಾಡಲು ದೀರ್ಘಾವಧಿವರೆಗೆ ನೆರವು ಕಲ್ಪಿಸಲಾಗುವುದು ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.