ನವದೆಹಲಿ: 13 ರಾಜ್ಯಗಳು ನಿಯಮ ರೂಪಿಸಿರುವುದರಿಂದ ನಾಲ್ಕು ಕಾರ್ಮಿಕ ಸಂಹಿತೆಗಳು ಮುಂದಿನ ಹಣಕಾಸು ವರ್ಷದಲ್ಲಿ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕೇಂದ್ರ ಕಾರ್ಮಿಕ ಸಚಿವಾಲಯವು ನಿಯಮಗಳನ್ನು ರೂಪಿಸಿ ಆಗಿದೆ. 2021ರ ಫೆಬ್ರುವರಿಯಲ್ಲಿ ಈ ಸಂಹಿತೆಗಳಿಗೆ ಕರಡು ನಿಯಮಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರವು ಪೂರ್ಣಗೊಳಿಸಿದೆ. ಇವುಗಳಿಗೆ ಸಂಬಂಧಿಸಿದಂತೆ ಬಹುತೇಕ ರಾಜ್ಯ ಸರ್ಕಾರಗಳು ಅಧಿಸೂಚನೆಯಲ್ಲಿ ಪ್ರಕಟಿಸಿವೆ. ಹೀಗಾಗಿ 2022–23ನೇ ಹಣಕಾಸು ವರ್ಷದಲ್ಲಿ ಕಾಯ್ದೆಗಳು ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸಗಡ, ಒಡಿಶಾ, ಅರುಣಾಚಲ ಪ್ರದೇಶ, ಹರಿಯಾಣ, ಜಾರ್ಖಂಡ್, ಪಂಜಾಬ್, ಮಣಿಪುರ, ಬಿಹಾರ, ಹಿಮಾಚಲ ಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶ ಜಮ್ಮು–ಕಾಶ್ಮೀರ ತಮ್ಮ ಅಧಿಸೂಚನೆಯಲ್ಲಿ ಪ್ರಕಟಿಸಿವೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.