ADVERTISEMENT

50 ಹೆಚ್ಚುವರಿ ವಿಮಾನ ನಿಲ್ದಾಣ, ಏರೋಡ್ರಮ್, ಹೆಲಿಪೋರ್ಟ್‌ ನಿರ್ಮಾಣ: ಬಜೆಟ್ ಘೋಷಣೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2023, 16:09 IST
Last Updated 1 ಫೆಬ್ರುವರಿ 2023, 16:09 IST
   

ನವದೆಹಲಿ: ಪ್ರಾದೇಶಿಕ ಸಂಪರ್ಕ ಸುಧಾರಣೆಗೆ 50ಕ್ಕೂ ಹೆಚ್ಚು ವಿಮಾನ ನಿಲ್ದಾಣ, ಏರೋಡ್ರೋಮ್‌, ಹೆಲಿಪೋರ್ಟ್‌ಗಳನ್ನು ಸ್ಥಾಪಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಘೋಷಿಸಿದ್ದಾರೆ.

2023-24ರ ಕೇಂದ್ರ ಬಜೆಟ್ ಮಂಡನೆ ವೇಳೆ ಅವರು ಈ ಘೋಷಣೆ ಮಾಡಿದ್ದಾರೆ.

ದೇಶದಾದ್ಯಂತ ಪ್ರಾದೇಶಿಕ ಸಂಪರ್ಕವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಉಡಾನ್ ಯೋಜನೆಗೆ ಈ ಕ್ರಮದಿಂದ ಮತ್ತಷ್ಟು ಉತ್ತೇಜನ ಸಿಗುವ ನಿರೀಕ್ಷೆಯಿದೆ.

ಬಜೆಟ್ 2023: ನಿಮ್ಮ ಆದಾಯ ತೆರಿಗೆ ಲೆಕ್ಕಾಚಾರ ಹಾಕಲು ಇಲ್ಲಿ ಕ್ಲಿಕ್ ಮಾಡಿ

ADVERTISEMENT

‘ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸಲು 50 ಹೆಚ್ಚುವರಿ ವಿಮಾನ ನಿಲ್ದಾಣಗಳು, ಏರೋಡ್ರೋಮ್‌, ಹೆಲಿಪ್ಯಾಡ್‌ಗಳು ಮತ್ತು ಜಲ ಮಾರ್ಗಗಳನ್ನು ರೂಪಿಸಲಾಗುವುದು’ ಎಂದು ಸೀತಾರಾಮನ್ ಹೇಳಿದರು.

ಇದನ್ನೂ ಓದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.