ನವದೆಹಲಿ: ‘ಬಿಎಸ್‌ಎನ್‌ಎಲ್‌ನ 70 ಸಾವಿರ ಸಿಬ್ಬಂದಿಯು ಸ್ವಯಂ ನಿವೃತ್ತಿ ಯೋಜನೆಯನ್ನು (ವಿಆರ್‌ಎಸ್) ಆಯ್ಕೆ ಮಾಡಿಕೊಂಡಿದ್ದಾರೆ’ ಎಂದು ಸಂಸ್ಥೆಯ ಅಧ್ಯಕ್ಷ ಪಿ.ಕೆ. ಪೂರ್ವರ್ ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರದ ನಿರ್ದೇಶನದಂತೆ ಸಂಸ್ಥೆಯು ವಿಆರ್‌ಎಸ್ ಆಯ್ಕೆ ಮಾಡಿಕೊಳ್ಳಲು ನವೆಂಬರ್ 4 ರಿಂದ ಡಿಸೆಂಬರ್ 3ರ ಕಾಲಮಿತಿ ನಿಗದಿಪಡಿಸಿದೆ. 2020ರ ಜನವರಿ 31ರಿಂದ ಯೋಜನೆಯು ಅನ್ವಯಿಸಲಿದೆ.
50 ವರ್ಷ ಅಥವಾ ಅದಕ್ಕೂ ಹೆಚ್ಚಿನ ವಯಸ್ಸಿನವರು ಈ ಯೋಜನೆಗೆ ಅರ್ಹರಾಗಿರುತ್ತಾರೆ.
ಗ್ರಾಮೀಣ ಪ್ರದೇಶದಲ್ಲಿ ಕಾರ್ಯಾಚರಣೆ ಮತ್ತು ವಹಿವಾಟು ಯಾವುದೇ ಸಮಸ್ಯೆಗಳಿಲ್ಲದೆ ಸುಗಮವಾಗಿ ನಡೆಯುವಂತೆ ಕ್ರಮ ಕೈಗೊಳ್ಳುವಂತೆ ದೂರಸಂಪರ್ಕ ಇಲಾಖೆಯು ಸಂಸ್ಥೆಗೆ ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.