ಮುಂಬೈ: ₹2 ಸಾವಿರ ಮುಖಬೆಲೆಯ ಶೇ 97.69ರಷ್ಟು ನೋಟುಗಳು ಬ್ಯಾಂಕ್‌ಗಳಿಗೆ ಮರಳಿದ್ದು, ಇನ್ನೂ ₹8,202 ಕೋಟಿ ಮೌಲ್ಯದ ನೋಟುಗಳು ಸಾರ್ವಜನಿಕರ ಬಳಿ ಇವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸೋಮವಾರ ತಿಳಿಸಿದೆ.
ಒಟ್ಟು ₹3.56 ಲಕ್ಷ ಕೋಟಿ ಮೌಲ್ಯದ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ 2023ರ ಮೇ 19ರಂದು ಆರ್‌ಬಿಐ ಘೋಷಿಸಿತ್ತು.
ಬ್ಯಾಂಕ್‌ಗಳಲ್ಲಿ ಠೇವಣಿ ಇಡಲು ಹಾಗೂ ಬೇರೆ ಮುಖಬೆಲೆಯ ನೋಟುಗಳೊಂದಿಗೆ ಬದಲಾಯಿಸಿಕೊಳ್ಳುವುದಕ್ಕೆ ಆರ್‌ಬಿಐನ 19 ಪ್ರಾದೇಶಿಕ ಕಚೇರಿಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಂಚೆ ಮೂಲಕವೂ ಈ ಪ್ರಾದೇಶಿಕ ಕಚೇರಿಗಳಿಗೆ ನೋಟುಗಳನ್ನು ಕಳುಹಿಸಿ ಬದಲಾಯಿಸಿಕೊಳ್ಳಬಹುದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.