ನವದೆಹಲಿ: ಅದಾನಿ ಗ್ರೀನ್ ಎನರ್ಜಿ ಕಂಪನಿಯು (ಎಜಿಇಎಲ್) 1,799 ಮೆಗಾವಾಟ್ ಸೌರ ವಿದ್ಯುತ್ ಪೂರೈಕೆ ಸಂಬಂಧ ಭಾರತೀಯ ಸೌರ ಶಕ್ತಿ ನಿಗಮದ (ಎಸ್‌ಇಸಿಐ) ಜೊತೆ ವಿದ್ಯುತ್ ಖರೀದಿ ಒಪ್ಪಂದಕ್ಕೆ (ಪಿಪಿಎ) ಸಹಿ ಹಾಕಿದೆ.
ಒಟ್ಟು ಎಂಟು ಸಾವಿರ ಮೆಗಾವಾಟ್ ಸೌರ ವಿದ್ಯುತ್ ಪೂರೈಕೆ ಸಂಬಂಧ 2020ರ ಜೂನ್‌ನಲ್ಲಿ ಎಸ್‌ಇಸಿಐನ ಟೆಂಡರ್ ಪಡೆಯಲಾಗಿತ್ತು. ಈ ಕುರಿತು ಬಾಕಿ ಉಳಿದಿದ್ದ ಒಪ್ಪಂದ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಅದಾನಿ ಕಂಪನಿ ಹೇಳಿದೆ.
ಹಸಿರು ಇಂಧನಕ್ಕೆ ಸಂಬಂಧಿಸಿದ ಅತಿದೊಡ್ಡ ಒಪ್ಪಂದವನ್ನು ಪೂರ್ಣಗೊಳಿಸುವ ಮೂಲಕ ಸುಸ್ಥಿರ ಇಂಧನದ ಕಾರ್ಯಕ್ಷೇತ್ರವನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದೆ.
2030ರ ವೇಳೆಗೆ ಭಾರತವು ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯವನ್ನು 500 ಗಿಗಾವಾಟ್‌ಗೆ ಹೆಚ್ಚಿಸುವ ಗುರಿ ಹೊಂದಿದೆ. ಇದಕ್ಕೆ ಹೆಚ್ಚುವರಿಯಾಗಿ 45 ಗಿಗಾವಾಟ್‌ನಷ್ಟು ನವೀಕರಿಸಬಹುದಾದ ಇಂಧನದ ಕೊಡುಗೆ ನೀಡಲು ಕಂಪನಿ ನಿರ್ಧರಿಸಿದೆ. ಇದಕ್ಕಾಗಿ ಹೂಡಿಕೆ ಮಾಡಿರುವ ಬಂಡವಾಳವನ್ನು ಐದು ಪಟ್ಟು ಹೆಚ್ಚಿಸಲಾಗಿದೆ’ ಎಂದು ಎಜಿಇಎಲ್ ಸಿಇಒ ಅಮಿತ್ ಸಿಂಗ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.