ADVERTISEMENT

ಜಿಡಿಪಿ ಶೇ 7ರಷ್ಟು ಪ್ರಗತಿ: ಎಡಿಬಿ

ಪಿಟಿಐ
Published 17 ಜುಲೈ 2024, 15:11 IST
Last Updated 17 ಜುಲೈ 2024, 15:11 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: 2024–25ನೇ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ ಏಷ್ಯಾ ಅಭಿವೃದ್ಧಿ ಬ್ಯಾಂಕ್‌ (ಎಡಿಬಿ) ದೇಶದ ಜಿಡಿಪಿ ಬೆಳವಣಿಗೆ ಕುರಿತ ಮುನ್ನೋಟದಲ್ಲಿ ಯಾವುದೇ ಪರಿಷ್ಕರಣೆ ಮಾಡದೆ ಯಥಾಸ್ಥಿತಿ ಕಾಯ್ದುಕೊಂಡಿದೆ.  

ಬುಧವಾರ ಬಿಡುಗಡೆಯಾಗಿರುವ ಜುಲೈ ತಿಂಗಳ ಮುನ್ನೋಟ ವರದಿಯಲ್ಲಿ ಜಿಡಿಪಿಯು ಶೇ 7ರಷ್ಟು ಪ್ರಗತಿ ಕಾಣಲಿದೆ. ಏಪ್ರಿಲ್‌ನ ವರದಿಯಲ್ಲೂ ಇಷ್ಟೇ ಬೆಳವಣಿಗೆ ದಾಖಲಿಸಿದೆ ಎಂದು ಹೇಳಿತ್ತು.

ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯಲಿದ್ದು, ಕೃಷಿ ಚಟುವಟಿಕೆಗಳು ಚೇತರಿಕೆ ಕಾಣಲಿವೆ. 2025–26ನೇ ಅರ್ಥಿಕ ವರ್ಷದಲ್ಲಿ ಜಿಡಿಪಿಯು ಶೇ 7.2ರಷ್ಟು ಪ್ರಗತಿ ಕಾಣಲಿದೆ ಎಂದು ತಿಳಿಸಿದೆ. 

ADVERTISEMENT

2023–24ನೇ ಆರ್ಥಿಕ ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ದೇಶದ ಆರ್ಥಿಕತೆ ಬೆಳವಣಿಗೆಯು ಶೇ 8.2ರಷ್ಟು ದಾಖಲಾಗಿದೆ.  

ಮಾರ್ಚ್‌ ತ್ರೈಮಾಸಿಕದಲ್ಲಿ ಸೇವಾ ಚಟುವಟಿಕೆಯ ವಿಸ್ತರಣೆಯು ಸದೃಢವಾಗಿದೆ. ಸೇವಾ ವಲಯದ ಪರ್ಚೇಸಿಂಗ್‌ ಮ್ಯಾನೇಜರ್ಸ್‌ ಇಂಡೆಕ್ಸ್‌ (ಪಿಎಂಐ) ಉತ್ತಮವಾಗಿದೆ. ತಯಾರಿಕೆ ಮತ್ತು ಗೃಹ ನಿರ್ಮಾಣ ಚಟುವಟಿಕೆಗಳಿಗೆ ಬೇಡಿಕೆ ಹೆಚ್ಚಿದೆ. ಇದರಿಂದ ಕೈಗಾರಿಕೆಗಳ ಬೆಳವಣಿಗೆಯು ಸದೃಢವಾಗುವ ನಿರೀಕ್ಷೆಯಿದೆ ಎಂದು ಹೇಳಿದೆ. 

2024–25ರಲ್ಲಿ ಭಾರತದ ಜಿಡಿಪಿಯು ಶೇ 7ರಷ್ಟು ಪ್ರಗತಿ ಕಾಣಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯು ಹೇಳಿದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ ಜಿಡಿಪಿಯು ಶೇ 7.2ರಷ್ಟು ಪ್ರಗತಿ ಕಾಣಲಿದೆ ಎಂದು ಅಂದಾಜಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.