ಗಿರೀಶ್ ಚಂದ್ರ ಮುರ್ಮು
–ಪಿಟಿಐ ಚಿತ್ರ
ನವದೆಹಲಿ: ‘ಸರ್ಕಾರದ ಆದಾಯ ಮತ್ತು ವೆಚ್ಚಗಳ ಲೆಕ್ಕ ಪರಿಶೋಧನೆಯ ಗುಣಮಟ್ಟದ ಸುಧಾರಣೆಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುವುದು’ ಎಂದು ಮಹಾ ಲೆಕ್ಕಪರಿಶೋಧಕ ಮತ್ತು ಮಹಾಲೇಖಪಾಲ (ಸಿಎಜಿ) ಗಿರೀಶ್ ಚಂದ್ರ ಮುರ್ಮು ತಿಳಿಸಿದ್ದಾರೆ.
‘ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಹೆಚ್ಚು ಪ್ರಚಲಿತದಲ್ಲಿದೆ. ಸಾರ್ವಜನಿಕ ವೆಚ್ಚದ ಗುಣಮಟ್ಟ ಹೆಚ್ಚಿಸಲು ಭಾರತೀಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಈ ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಸಿದ್ಧವಿದೆ’ ಎಂದು ಹೇಳಿದ್ದಾರೆ.
‘ತಂತ್ರಜ್ಞಾನ ಅಭಿವೃದ್ಧಿಯಾದಂತೆ ನಾವು ಕೂಡ ಅದಕ್ಕೆ ತಕ್ಕಹಾಗೆ ಅಭಿವೃದ್ಧಿ ಹೊಂದಬೇಕು. ಸವಾಲುಗಳನ್ನು ಎದುರಿಸಿ ಮೇಲುಗೈ ಸಾಧಿಸಬೇಕು. ಜಾಗತಿಕಮಟ್ಟದ ತಂತ್ರಜ್ಞಾನದ ಅನುಭವ ಪಡೆಯುವ ಜೊತೆಗೆ, ಅದರ ಬಳಕೆಯ ಅಭ್ಯಾಸವನ್ನು ಮಾಡಿಕೊಳ್ಳಬೇಕಿದೆ’ ಎಂದು ತಿಳಿಸಿದ್ದಾರೆ.
ಲೆಕ್ಕ ಪರಿಶೋಧನೆಯಲ್ಲಿ ಎ.ಐ ತಂತ್ರಜ್ಞಾನ ಸೇರಿ ಹೊಸ ತಂತ್ರಜ್ಞಾನಗಳ ಬಳಕೆಗೆ ಒತ್ತು ನೀಡಲಾಗಿದೆ. ಈ ನಿಟ್ಟಿನಲ್ಲಿ ಇತ್ತೀಚೆಗೆ ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಜೊತೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.