ADVERTISEMENT

‘ವಾರಾಂತ್ಯದೊಳಗೆ ಟಾಟಾ ಸಮೂಹಕ್ಕೆ ಏರ್ ಇಂಡಿಯಾ ಹಸ್ತಾಂತರ’

ಪಿಟಿಐ
Published 24 ಜನವರಿ 2022, 12:15 IST
Last Updated 24 ಜನವರಿ 2022, 12:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಏರ್‌ ಇಂಡಿಯಾ ಕಂಪನಿಯನ್ನು ಈ ವಾರದ ಅಂತ್ಯದೊಳಗೆ ಟಾಟಾ ಸಮೂಹಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಬಿಡ್‌ ಪ್ರಕ್ರಿಯೆಯ ಮೂಲಕ, ಏರ್‌ ಇಂಡಿಯಾವನ್ನು ಟಾಟಾ ಸಮೂಹದ ಅಂಗಸಂಸ್ಥೆ ಟೆಲೆಸ್‌ ಪ್ರೈವೇಟ್‌ ಲಿಮಿಟೆಡ್‌ಗೆ ಮಾರಾಟ ಮಾಡುವ ನಿರ್ಧಾರವನ್ನುಅಕ್ಟೋಬರ್‌ 8ರಂದು ಘೋಷಿಸಿತು.

ಬಳಿಕ ಅಕ್ಟೋಬರ್ 11ರಂದು ವಿಮಾನಯಾನ ಕಂಪ‍ನಿಯನ್ನು₹ 18 ಸಾವಿರ ಕೋಟಿಗೆ ಮಾರಾಟ ಮಾಡುವ ಆಸಕ್ತಿ ಇದೆ ಎಂಬ ಪತ್ರವನ್ನು ಕೇಂದ್ರ ಸರ್ಕಾರವು ಟಾಟಾ ಸಮೂಹಕ್ಕೆ ನೀಡಿತು. ಅಕ್ಟೋಬರ್‌ 25ರಂದು ಕೇಂದ್ರ ಸರ್ಕಾರ ಮತ್ತು ಟಾಟಾ ಸನ್ಸ್‌ ಷೇರು ಖರೀದಿ ಒಪ್ಪಂದಕ್ಕೆ ಸಹಿ ಹಾಕಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.