ನವದೆಹಲಿ: ಭಾರ್ತಿ ಏರ್‌ಟೆಲ್ ಕಂಪನಿಯು ಮೇ ತಿಂಗಳಿನಲ್ಲಿ 46.1 ಲಕ್ಷ ಮೊಬೈಲ್ ಬಳಕೆದಾರರನ್ನು ಕಳೆದುಕೊಂಡಿದ್ದರೆ ರಿಲಯನ್ಸ್ ಜಿಯೊ ಕಂಪನಿಯು ಇದೇ ಅವಧಿಯಲ್ಲಿ 35.54 ಲಕ್ಷ ಬಳಕೆದಾರರನ್ನು ಗಳಿಸಿಕೊಂಡಿದೆ.
ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಈ ಮಾಹಿತಿ ನೀಡಿದೆ. ಮೇ ತಿಂಗಳಿನಲ್ಲಿ ಭಾರತದ ಮೊಬೈಲ್ ಮಾರುಕಟ್ಟೆಯು 62.7 ಲಕ್ಷ ಬಳಕೆದಾರರನ್ನು ಕಳೆದುಕೊಂಡಿದೆ. ಇದರಿಂದ ಒಟ್ಟಾರೆ ಬಳಕೆದಾರರ ಸಂಖ್ಯೆಯು 117.6 ಕೋಟಿಗೆ ಇಳಿಕೆ ಕಂಡಿದೆ.
ಮೇ ತಿಂಗಳಿನಲ್ಲಿ ಜಿಯೊಗೆ ಹೊಸದಾಗಿ 35.54 ಲಕ್ಷ ಮೊಬೈಲ್ ಬಳಕೆದಾರರು ಸೇರ್ಪಡೆ ಆಗಿದ್ದು, ಒಟ್ಟು ಬಳಕೆದಾರರ ಸಂಖ್ಯೆ 43.12 ಕೋಟಿಗೆ ಏರಿಕೆ ಆಗಿದೆ.
ವೊಡಾಫೋನ್ ಐಡಿಯಾ ಕಂಪನಿಯು ಸಹ 42.8 ಲಕ್ಷ ಬಳಕೆದಾರರನ್ನು ಕಳೆದುಕೊಂಡಿದ್ದು ಇದರ ಒಟ್ಟು ಬಳಕೆದಾರರ ಸಂಖ್ಯೆ 27.7 ಕೋಟಿಗೆ ತಗ್ಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.