ವಾಷಿಂಗ್ಟನ್ : ಭಾರತ ಮೂಲದ ಅಜಯ್ ಬಂಗಾ ಅವರು ವಿಶ್ವ ಬ್ಯಾಂಕ್‌ನ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅವರು ಜೂನ್ 2ರಿಂದ ಐದು ವರ್ಷಗಳ ಅವಧಿಗೆ ಈ ಹುದ್ದೆಯಲ್ಲಿ ಇರಲಿದ್ದಾರೆ.
ವಿಶ್ವ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಬಂಗಾ ಅವರ ಹೆಸರನ್ನು ಸೂಚಿಸುತ್ತಿರುವುದಾಗಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಫೆಬ್ರುವರಿಯಲ್ಲಿ ಪ್ರಕಟಿಸಿದ್ದರು. ಬಂಗಾ ಅವರಿಗೆ ಕೇಂದ್ರ ಸರ್ಕಾರವು 2016ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.