ನವದೆಹಲಿ: ಇ–ಕಾಮರ್ಸ್ ದಿಗ್ಗಜ ಅಮೆಜಾನ್ ಕಂಪನಿಯು ತನ್ನ ಅಲೆಕ್ಸಾ ವಾಯ್ಸ್ ಅಸಿಸ್ಟೆಂಟ್ ಘಟಕದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾಗಿರುವುದಾಗಿ ಅಧಿಕೃತವಾಗಿ ಘೋಷಿಸಿದೆ.
ನೂರಾರು ನೌಕರರನ್ನು ತೆಗೆದುಹಾಕಲಾಗುವುದು ಎಂದು ಹೇಳಲಾಗಿದೆ. ಒಟ್ಟು ಎಷ್ಟು ಮಂದಿಯನ್ನು ಕೆಲಸದಿಂದ ತೆಗೆಯಲಾಗುವುದು ಎಂಬುದನ್ನು ಹೇಳಲು ಕಂಪನಿಯ ವಕ್ತಾರರು ನಿರಾಕರಿಸಿದ್ದಾರೆ.
ಅಲೆಕ್ಸಾ ಘಟಕದಲ್ಲಿರುವ ಉದ್ಯೋಗಿಗಳನ್ನು ಮಾತ್ರ ಕೆಲಸದಿಂದ ತೆಗೆಯಲಾಗುವುದು ಎಂದು ಕಂಪನಿ ಸ್ಪಷ್ಟಪಡಿಸಿದೆ.
ಎಐ ಬಳಕೆ ಹಿನ್ನಲೆಯಲ್ಲಿ ಗ್ರಾಹಕರಿಗೆ ಹೊಸ ತಂತ್ರಜ್ಞಾನ ನೀಡುವುದು ಹಾಗೂ ಹೊಸ ಬದಲಾವಣೆಗಳಿಗಾಗಿ ಈ ಕ್ರಮ ಅನಿವಾರ್ಯವಾಗಿದೆ ಎಂದು ಅಲೆಕ್ಸಾ ಮತ್ತು ಫೈರ್ ಟಿವಿಯ ಉಪಾಧ್ಯಕ್ಷ ಡೇನಿಯಲ್ ರೌಶ್ ಮೇಲ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.