ADVERTISEMENT

ಬೆಂಗಳೂರಿನಲ್ಲಿ ಎಎಂಡಿ ಜಾಗತಿಕ ವಿನ್ಯಾಸ ಕೇಂದ್ರ ಆರಂಭ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2023, 0:30 IST
Last Updated 29 ನವೆಂಬರ್ 2023, 0:30 IST
<div class="paragraphs"><p>ರಾಯಿಟರ್ಸ್ ಚಿತ್ರ</p></div>

ರಾಯಿಟರ್ಸ್ ಚಿತ್ರ

   

ರಾಯಿಟರ್ಸ್ ಚಿತ್ರ

ಬೆಂಗಳೂರು: ಅಮೆರಿಕ ಮೂಲದ ಸೆಮಿಕಂಡಕ್ಟರ್‌ ಕಂಪನಿ ಎಎಂಡಿ, ಬೆಂಗಳೂರಿನಲ್ಲಿ ತನ್ನ ಅತಿ ದೊಡ್ಡ ಜಾಗತಿಕ ವಿನ್ಯಾಸ ಕೇಂದ್ರವನ್ನು ಆರಂಭಿಸಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿ ಅಶ್ವಿನಿ ವೈಷ್ಣವ್ ಅವರು ಈ ಕೇಂದ್ರವನ್ನು ಉದ್ಘಾಟಿಸಿದರು.

ADVERTISEMENT

ಭಾರತದಲ್ಲಿ ₹3,300 ಕೋಟಿ ಹೂಡಿಕೆ ಮಾಡುವುದಾಗಿ ಕಂಪನಿಯು ಜುಲೈನಲ್ಲಿ ಘೋಷಿಸಿತ್ತು. ಇದರ ಭಾಗವಾಗಿ ಈ ಹೆಜ್ಜೆ ಇಟ್ಟಿದೆ. 5 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಇದ್ದು, 3 ಸಾವಿರ ಎಂಜಿನಿಯರ್‌ಗಳನ್ನು ನೇಮಿಸಿಕೊಳ್ಳುವ ಯೋಜನೆಯನ್ನು ಕಂಪನಿ ಹೊಂದಿದೆ. ಸೆಮಿಕಂಡಕ್ಟರ್‌ ತಂತ್ರಜ್ಞಾನದ ಅಭಿವೃದ್ಧಿ ಮತ್ತು ವಿನ್ಯಾಸ ಸೇರಿದಂತೆ ಕೃತಕ ಬುದ್ಧಿಮತ್ತೆ, ಮಷಿನ್‌ ಲರ್ನಿಂಗ್‌ ಕಡೆಗೂ ಈ ಕೇಂದ್ರವು ಗಮನ ಹರಿಸಲಿದೆ ಎಂದು ಕಂಪನಿಯು ತಿಳಿಸಿದೆ.

ಎಎಂಡಿ ಬೆಂಗಳೂರಿನಲ್ಲಿ ತನ್ನ ಅತಿದೊಡ್ಡ ವಿನ್ಯಾಸ ಕೇಂದ್ರವನ್ನು ಸ್ಥಾಪಿಸಿರುವುದು ಜಾಗತಿಕ ಕಂಪನಿಗಳು ಭಾರತದ ಮೇಲೆ ಹೊಂದಿರುವ ವಿಶ್ವಾಸಕ್ಕೆ ಸಾಕ್ಷಿಯಾಗಿದೆ ಎಂದು ಅಶ್ಚಿನಿ ವೈಷ್ಣವ್ ತಿಳಿಸಿದರು.

ಎಎಂಡಿ ಕಾರ್ಯನಿರ್ವಾಹಕ ಉಪಾಧ್ಯಕ್ಷ ಮಾರ್ಕ್ ಪೇಪರ್‌ಮಾಸ್ಟರ್, ಈ ಹೂಡಿಕೆಯು ಭಾರತದೊಂದಿಗಿನ ನಮ್ಮ ಸಂಬಂಧವನ್ನು ಬಲಪಡಿಸುತ್ತದೆ. ಈ ಹೊಸ ವಿನ್ಯಾಸ ಕೇಂದ್ರವು ತಂತ್ರಜ್ಞಾನ ಮತ್ತು ಉತ್ಪನ್ನ ಅಭಿವೃದ್ಧಿಗೆ ಸಹಾಯ ಮಾಡಲಿದೆ ಎಂದು ಹೇಳಿದರು.

‘ಇನ್ನೂ 3 ಸೆಮಿಕಂಡಕ್ಟರ್ ಘಟಕ’

ಭಾರತವು ಮುಂದಿನ ಕೆಲವು ತಿಂಗಳುಗಳಲ್ಲಿ ₹1 ಲಕ್ಷ ಕೋಟಿವರೆಗಿನ ಹೂಡಿಕೆಯೊಂದಿಗೆ ಇನ್ನೂ ಮೂರು ಸೆಮಿಕಂಡಕ್ಟರ್ ತಯಾರಿಕಾ ಘಟಕಗಳು ಬರಲಿವೆ ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದರು. ತಮಿಳುನಾಡು, ಕರ್ನಾಟಕ, ತೆಲಂಗಾಣ, ಗುಜರಾತ್ ಮತ್ತು ಉತ್ತರಪ್ರದೇಶ ರಾಜ್ಯ ಸರ್ಕಾರಗಳೊಂದಿಗೆ ಈ ಸಂಬಂಧ ಮಾತುಕ ನಡೆಯುತ್ತಿದೆ. ಕೆಲವೇ ತಿಂಗಳಲ್ಲಿ ಸ್ಥಳ ಅಂತಿಮಗೊಳ್ಳಲಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.