ನವದೆಹಲಿ: ಭಾರತದಲ್ಲಿ ಔಡಿ ಕಾರುಗಳ ಮಾರಾಟವು ಜನವರಿಯಿಂದ ಸೆಪ್ಟೆಂಬರ್ ಅವಧಿಯಲ್ಲಿ ಶೇ 88ರಷ್ಟು ಹೆಚ್ಚಾಗಿದ್ದು, ಒಟ್ಟು 5,530 ಕಾರು ಮಾರಾಟ ಆಗಿವೆ.
ಕಳೆದ ವರ್ಷ ಇದೇ ಅವಧಿಯಲ್ಲಿ 2,947 ಕಾರು ಮಾರಾಟವಾಗಿತ್ತು. ಹೊಸ ಕ್ಯು8 ಇ–ಟ್ರಾನ್, ಕ್ಯು 8 ಸ್ಪೋರ್ಟ್‌ಬ್ಯಾಕ್ ಇ–ಟ್ರಾನ್, ಕ್ಯು3 ಮತ್ತು ಕ್ಯು 3 ಸ್ಪೋರ್ಟ್‌ಬ್ಯಾಕ್ ಮಾದರಿಗಳಿಗೆ ಉತ್ತಮ ಬೇಡಿಕೆ ಇದೆ ಎಂದು ಔಡಿ ಇಂಡಿಯಾದ ಮುಖ್ಯಸ್ಥ ಬಲ್ಬೀರ್ ಸಿಂಗ್ ಧಿಲ್ಲೋನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.