ನವದೆಹಲಿ: ಜರ್ಮನಿಯ ವಾಹನ ತಯಾರಿಕಾ ಕಂಪನಿ ಔಡಿ, ಜೂನ್ 1ರಿಂದ ತನ್ನ ಕಾರುಗಳ ಬೆಲೆಯನ್ನು ಶೇ 2ರಷ್ಟು ಹೆಚ್ಚಿಸಲು ನಿರ್ಧರಿಸಿದೆ.
ಉತ್ಪಾದನೆ ಮತ್ತು ಸಾಗಣೆ ವೆಚ್ಚ ಹೆಚ್ಚಳವನ್ನು ಸರಿದೂಗಿಸಲು ಈ ನಿರ್ಧಾರಕೈಗೊಳ್ಳಲಾಗಿದೆ ಎಂದು ಔಡಿ ಇಂಡಿಯಾ ಮುಖ್ಯಸ್ಥ ಬಲ್ಬೀರ್ ಸಿಂಗ್ ಧಿಲ್ಲೋನ್ ಹೇಳಿದ್ದಾರೆ.
2023–24ರಲ್ಲಿ ಭಾರತದಲ್ಲಿ ಕಂಪನಿಯ 7,207 ವಾಹನಗಳು ಮಾರಾಟವಾಗಿವೆ. ಹಿಂದಿನ ಇದೇ ಅವಧಿಗೆ ಹೋಲಿಸಿದರೆ ಶೇ 33ರಷ್ಟು ಏರಿಕೆಯಾಗಿದೆ. ಕಂಪನಿಯು ದೇಶದಲ್ಲಿ ಎ4, ಕ್ಯು3, ಕ್ಯು5, ಆರ್‌ಎಸ್ ಕ್ಯು8 ಕಾರುಗಳನ್ನು ಮಾರಾಟ ಮಾಡುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.