ADVERTISEMENT

ಗ್ರಾಮೀಣ ಜನರಿಗೆ ಜೀವ ವಿಮೆ: ಬಜಾಜ್‌ ಅಲಯನ್ಸ್‌ ಲೈಫ್‌ ಇನ್ಶುರೆನ್ಸ್‌ ಪಾಲುದಾರಿಕೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2021, 16:59 IST
Last Updated 11 ನವೆಂಬರ್ 2021, 16:59 IST

ನವದೆಹಲಿ: ಗ್ರಾಮೀಣ ಪ್ರದೇಶಗಳ ಜನರನ್ನು ತಲುಪುವ ಉದ್ದೇಶದಿಂದ ಬಜಾಜ್‌ ಅಲಯನ್ಸ್‌ ಲೈಫ್‌ ಇನ್ಶುರೆನ್ಸ್‌ ಕಂಪನಿಯು ಇಂಡಿಯಾ ಪೋಸ್ಟ್‌ ಪೇಮೆಂಟ್ಸ್‌ ಬ್ಯಾಂಕ್‌ (ಐಪಿಪಿಬಿ) ಮತ್ತು ಅಂಚೆ ಇಲಾಖೆಯ ಸಹಯೋಗದೊಂದಿಗೆ ಎರಡು ಹೊಸ ವಿಮಾ ಉತ್ಪನ್ನಗಳನ್ನು ಬಿಡುಗಡೆ ಮಾಡಿದೆ.

ಐಪಿಪಿಬಿ ಮೂಲಕ ಗ್ರಾಹಕರಿಗೆ ಅವಧಿ ಮತ್ತು ವಾರ್ಷಿಕ ಜೀವ ವಿಮಾ ಉತ್ಪನ್ನಗಳನ್ನು ನೀಡಲು ಕಂಪನಿ ಮುಂದಾಗಿದೆ. ಸಮಾಜದ ದುರ್ಬಲ ವರ್ಗದವರು, ಬ್ಯಾಂಕಿಂಗ್‌ ಸೌಲಭ್ಯದಿಂದ ದೂರ ಇರುವವರಿಗೆ ಆರ್ಥಿಕ ಸುರಕ್ಷತೆ ಒದಗಿಸಲು ಈ ಪಾಲುದಾರಿಕೆ ಮಾಡಿಕೊಳ್ಳಲಾಗಿದೆ ಎಂದು ಮೂರು ಕಂಪನಿಗಳ ಜಂಟಿ ಹೇಳಿಕೆ ತಿಳಿಸಿದೆ.

ಇದರಿಂದಾಗಿ ಗ್ರಾಮೀಣ ಭಾಗದ ಜನರು ಬಜಾಜ್‌ ಅಲಯನ್ಸ್ ಲೈಫ್‌ ಸ್ಮಾರ್ಟ್‌ ಪ್ರೊಟೆಕ್ಟ್‌ ಗೋಲ್‌ ಮತ್ತು ಬಜಾಜ್‌ ಅಲಯನ್ಸ್‌ ಲೈಫ್‌ ಗ್ಯಾರಂಟೀಡ್‌ ಪೆನ್ಶನ್‌ ಗೋಲ್‌ ಯೋಜನೆಗಳನ್ನು ಪಡೆಯಬಹುದಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.