ಮುಂಬೈ/ ನವದೆಹಲಿ: ಜನವರಿಯಲ್ಲಿ ಬಜಾಜ್ ಆಟೊ, ಮಹೀಂದ್ರ ಆ್ಯಂಡ್ ಮಹೀಂದ್ರ ಮತ್ತು ಹುಂಡೈ ಮೋಟರ್ ವಾಹನಗಳ ಮಾರಾಟದಲ್ಲಿ ಏರಿಕೆಯಾಗಿದೆ.
ಬಜಾಜ್ ಕಂಪನಿಯ 3,56,010 ವಾಹನಗಳು ಮಾರಾಟವಾಗಿವೆ. ಹಿಂದಿನ ವರ್ಷ ಇದೇ ಅವಧಿಯಲ್ಲಿ 2,87,935 ವಾಹನಗಳು ಮಾರಾಟವಾಗಿದ್ದವು. ಇದಕ್ಕೆ ಹೋಲಿಸಿದರೆ ಮಾರಾಟದಲ್ಲಿ ಶೇ 24ರಷ್ಟು ಏರಿಕೆಯಾಗಿದೆ ಎಂದು ಕಂಪನಿ ತಿಳಿಸಿದೆ.
ದೇಶೀಯ ವಾಹನ ಮಾರಾಟದಲ್ಲಿ ಶೇ 31ರಷ್ಟು ಏರಿಕೆಯಾಗಿದೆ. ಒಟ್ಟು 2,30,043 ವಾಹನಗಳು ಮಾರಾಟವಾಗಿವೆ. ಹಿಂದಿನ ವರ್ಷ ಇದೇ ಅವಧಿಯಲ್ಲಿ 1,75,210 ವಾಹನಗಳು ಮಾರಾಟವಾಗಿದ್ದವು.
ಮಹೀಂದ್ರ ಮಾರಾಟ ಶೇ 15ರಷ್ಟು ಹೆಚ್ಚಳ
ಮಹೀಂದ್ರ ಆ್ಯಂಡ್ ಮಹೀಂದ್ರ ಕಂಪನಿಯ ಒಟ್ಟು 73,944 ವಾಹನಗಳು ಮಾರಾಟವಾಗಿವೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 15ರಷ್ಟು ಏರಿಕೆಯಾಗಿದೆ.
ಯುಟಿಲಿಟಿ ವಾಹನಗಳ ಮಾರಾಟದಲ್ಲಿ ಶೇ 31ರಷ್ಟು ಏರಿಕೆಯಾಗಿದೆ. ಒಟ್ಟು 43,068 ವಾಹನಗಳು ಮಾರಾಟವಾಗಿವೆ. 23,481 ವಾಣಿಜ್ಯ ವಾಹನಗಳು ಮಾರಾಟವಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಮಾರಾಟದಲ್ಲಿ ಶೇ 8ರಷ್ಟು ಏರಿಕೆ ಆಗಿದೆ.
ಆದರೆ, ತ್ರಿಚಕ್ರ ವಾಹನ ಮಾರಾಟವು ಶೇ 14ರಷ್ಟು ಇಳಿಕೆಯಾಗಿದೆ. ಒಟ್ಟು 5,649 ವಾಹನಗಳಷ್ಟೇ ಮಾರಾಟವಾಗಿವೆ ಎಂದು ಕಂಪನಿ ತಿಳಿಸಿದೆ.
67,615 ವಾಹನಗಳ ಮಾರಾಟ
ಹುಂಡೈ ಮೋಟರ್ ಇಂಡಿಯಾದ 67,615 ವಾಹನಗಳು ಮಾರಾಟವಾಗಿವೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ 62,276 ವಾಹನ ಮಾರಾಟವಾಗಿದ್ದವು. ಇದಕ್ಕೆ ಹೋಲಿಸಿದರೆ ಶೇ 8.5ರಷ್ಟು ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.