ನವದೆಹಲಿ: ವಾಹನ ತಯಾರಿಕಾ ಕಂಪನಿ ಬಜಾಜ್ ಆಟೊ, 2023–24ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ತೆರಿಗೆ ನಂತರ, ಶೇ 35ರಷ್ಟು ನಿವ್ವಳ ಲಾಭ ಗಳಿಸಿದೆ.
2022–23ನೇ ಆರ್ಥಿಕ ವರ್ಷ ಮಾರ್ಚ್ ತ್ರೈಮಾಸಿಕದಲ್ಲಿ ₹1,433 ಕೋಟಿ ಲಾಭ ಗಳಿಸಿತ್ತು. ಈ ಬಾರಿ ₹1,936 ಕೋಟಿಗೆ ಏರಿಕೆ ಆಗಿದೆ ಎಂದು ಕಂಪನಿಯು ಗುರುವಾರ ತಿಳಿಸಿದೆ.
ವರಮಾನವು ₹8,905 ಕೋಟಿಯಿಂದ ₹11,485 ಕೋಟಿಗೆ ಮುಟ್ಟಿದೆ. ಒಟ್ಟಾರೆ ಶೇ 29ರಷ್ಟು ಹೆಚ್ಚಳವಾಗಿದೆ.
ತೆರಿಗೆ ನಂತರದ ಲಾಭವು 2022–23ರಲ್ಲಿ ₹5,628 ಕೋಟಿ ಇತ್ತು. 2023–24ರಲ್ಲಿ ₹7,479 ಕೋಟಿಗೆ ಹೆಚ್ಚಳವಾಗಿದೆ. ವರಮಾನವು ₹36,428 ಕೋಟಿಯಿಂದ ₹44,685 ಕೋಟಿಗೆ ಏರಿಕೆಯಾಗಿದೆ ಎಂದು ಕಂಪನಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.