ನವದೆಹಲಿ: ಬಜಾಜ್ ಫಿನ್‌ಸರ್ವ್ ಲಿಮಿಟೆಡ್, 2024–25ನೇ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ₹2,318 ಕೋಟಿ ನಿವ್ವಳ ಲಾಭ ಗಳಿಸಿದೆ.
ಹಿಂದಿನ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ ₹1,943 ಕೋಟಿ ಲಾಭ ಗಳಿಸಿತ್ತು. ಈ ಲಾಭಕ್ಕೆ ಹೋಲಿಸಿದರೆ ಶೇ 10ರಷ್ಟು ಏರಿಕೆಯಾಗಿದೆ ಎಂದು ಕಂಪನಿಯು, ಬುಧವಾರ ಷೇರುಪೇಟೆಗೆ ತಿಳಿಸಿದೆ.
ಈ ತ್ರೈಮಾಸಿಕದಲ್ಲಿ ಒಟ್ಟು ವರಮಾನ ₹31,480 ಕೋಟಿ ಆಗಿದೆ ಎಂದು ತಿಳಿಸಿದೆ.
ಬಜಾಜ್ ಸಮೂಹದ ಅಂಗಸಂಸ್ಥೆ ಬಜಾಜ್ ಅಲಯನ್ಸ್ ಜನರಲ್ ಇನ್ಶೂರೆನ್ಸ್ ಲಾಭದಲ್ಲಿ ಶೇ 39ರಷ್ಟು ಹೆಚ್ಚಳವಾಗಿದೆ. ಒಟ್ಟು ₹576 ಕೋಟಿ ಲಾಭ ಗಳಿಸಿದೆ. ಬಜಾಜ್ ಅಲಯನ್ಸ್ ಇನ್ಶೂರೆನ್ಸ್ ₹104 ಕೋಟಿ ಲಾಭ ದಾಖಲಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.