ನವದೆಹಲಿ: ಬಂಧನ್ ಬ್ಯಾಂಕ್, ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹209 ಕೋಟಿ ನಿವ್ವಳ ಲಾಭ ಗಳಿಸಿದೆ. ಸುಸ್ತಿ ಸಾಲದಲ್ಲಿ ಇಳಿಕೆ ಆಗಿರುವುದರಿಂದ ಲಾಭ ಗಳಿಸಲು ಸಾಧ್ಯವಾಗಿದೆ ಎಂದು ಬ್ಯಾಂಕ್ ತಿಳಿಸಿದೆ.
ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್ ₹3,008 ಕೋಟಿ ನಷ್ಟ ಅನುಭವಿಸಿತ್ತು. ಬ್ಯಾಂಕ್‌ನ ಒಟ್ಟು ವರಮಾನ ಶೇ 8.5ರಷ್ಟು ಹೆಚ್ಚಾಗಿ ₹2,669 ಕೋಟಿಗೆ ಏರಿಕೆ ಆಗಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ವರಮಾನವು ₹2,459 ಕೋಟಿ ಆಗಿತ್ತು ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.
ಗೃಹ ಹಣಕಾಸು ವಿಭಾಗವು ಶೇ 32ರಷ್ಟು ಉತ್ತಮ ಬೆಳವಣಿಗೆ ಕಂಡಿದೆ. ವಸೂಲಾಗದ ಸಾಲದ (ಎನ್‌ಪಿಎ) ನಿವ್ವಳ ಪ್ರಮಾಣವು ಶೇ 3.04 ರಿಂದ ಶೇ 1.86ಕ್ಕೆ ಇಳಿಕೆ ಆಗಿದೆ. ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತವು ₹5,613 ಕೋಟಿಯಿಂದ ₹1,279 ಕೋಟಿಗೆ ಇಳಿಕೆ ಆಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.