ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡಾ, 2024–25ನೇ ಆರ್ಥಿಕ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹5,238 ಕೋಟಿ ನಿವ್ವಳ ಲಾಭ ಗಳಿಸಿದೆ.
ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ₹4,253 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದ ಪ್ರಮಾಣದಲ್ಲಿ ಶೇ 23ರಷ್ಟು ಏರಿಕೆಯಾಗಿದೆ.
ಕಳೆದ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ ₹32,033 ಕೋಟಿ ವರಮಾನಗಳಿಸಲಾಗಿತ್ತು. ಈ ತ್ರೈಮಾಸಿಕದಲ್ಲಿ ₹35,445 ಕೋಟಿ ಗಳಿಸಲಾಗಿದೆ. ಬಡ್ಡಿ ವರಮಾನದಲ್ಲಿ ಏರಿಕೆಯಾಗಿದ್ದು, ₹30,263 ಕೋಟಿ ಗಳಿಸಲಾಗಿದೆ ಎಂದು ಬ್ಯಾಂಕ್, ಶುಕ್ರವಾರ ಷೇರುಪೇಟೆಗೆ ತಿಳಿಸಿದೆ.
ವಸೂಲಾಗದ ಸಾಲದ ಸರಾಸರಿ ಪ್ರಮಾಣವು ಶೇ 3.32ರಿಂದ ಶೇ 2.50ಕ್ಕೆ ತಗ್ಗಿದೆ. ನಿವ್ವಳ ಎನ್‌ಪಿಎ ಶೇ 0.76ರಿಂದ ಶೇ 0.60ಕ್ಕೆ ಇಳಿಕೆಯಾಗಿದೆ. ಸಮರ್ಪಕ ಬಂಡವಾಳ ಅನುಪಾತವು (ಸಿಎಆರ್) ಶೇ 15.30ರಿಂದ ಶೇ 16.26ಕ್ಕೆ ಹೆಚ್ಚಳವಾಗಿದೆ ಎಂದು ವಿವರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.