ನವದೆಹಲಿ: 2024–25ನೇ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡಾದ (ಬಿಒಬಿ) ನಿವ್ವಳ ಲಾಭದಲ್ಲಿ ಶೇ 10ರಷ್ಟು ಏರಿಕೆಯಾಗಿದೆ.
ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹4,070 ಕೋಟಿ ಲಾಭಗಳಿಸಿತ್ತು. ಈ ತ್ರೈಮಾಸಿಕದಲ್ಲಿ ₹4,458 ಕೋಟಿ ಲಾಭ ಗಳಿಸಿದೆ. ₹32,116 ಕೋಟಿ ವರಮಾನ ಗಳಿಸಿದೆ. ಒಟ್ಟು ಬಡ್ಡಿ ವರಮಾನ ₹29,629 ಕೋಟಿ ಆಗಿದೆ.
ವಸೂಲಾಗದ ಸಾಲದ ಸರಾಸರಿ ಪ್ರಮಾಣವು ಶೇ 3.51ರಿಂದ ಶೇ 2.88ಕ್ಕೆ ಇಳಿಕೆಯಾಗಿದೆ. ನಿವ್ವಳ ಎನ್‌ಪಿಎ ಶೇ 0.78ರಿಂದ ಶೇ 0.69ಕ್ಕೆ ಕುಗ್ಗಿದೆ. ಸಮರ್ಪಕ ಬಂಡವಾಳ ಅನುಪಾತವು (ಸಿಎಆರ್) ಶೇ 16.82ರಷ್ಟಿದೆ ಎಂದು ಬ್ಯಾಂಕ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.