ನವದೆಹಲಿ: ಆರ್‌ಬಿಐನ ಹಣಕಾಸು ನೀತಿ ಸಮಿತಿ ಸಭೆಗೂ ಮುನ್ನವೇ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಇಂಡಿಯಾವು (ಬಿಒಐ), ಸಾಲದ ಮೇಲಿನ ಬಡ್ಡಿದರವನ್ನು ಶೇ 0.10ರಷ್ಟು ಏರಿಕೆ ಮಾಡಿದೆ.
ಹೊಸ ಬಡ್ಡಿದರವು ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ರೆಪೊ ದರ ಆಧರಿಸಿದ ಸಾಲದ ಮೇಲಿನ ಬಡ್ಡಿದರವನ್ನು (ಆರ್‌ಬಿಎಲ್‌ಆರ್) ಶೇ 9.30ಕ್ಕೆ ಹೆಚ್ಚಿಸಲಾಗಿದೆ ಎಂದು ಬ್ಯಾಂಕ್, ಷೇರುಪೇಟೆಗೆ ತಿಳಿಸಿದೆ.
ಸರ್ಕಾರಿ ಸ್ವಾಮ್ಯದ ಇಂಡಿಯನ್ ಬ್ಯಾಂಕ್, ಬಿಪಿಎಲ್‌ಆರ್ ಆಧಾರಿತ (ಬೆಂಚ್‌ಮಾರ್ಕ್ ಪ್ರೈಮ್ ಲೆಂಡಿಂಗ್ ರೇಟ್) ಸಾಲದ ಬಡ್ಡಿದರವನ್ನು ಶೇ 0.05ರಷ್ಟು ಹೆಚ್ಚಿಸಿದ್ದು, ಏಪ್ರಿಲ್ 3ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.