ನವದೆಹಲಿ: ಬ್ಯಾಂಕ್ ಒಕ್ಕೂಟಗಳ ಸಂಯುಕ್ತ ವೇದಿಕೆಯು (ಯುಎಫ್‌ಬಿಯು) ಸೋಮವಾರ, ಮಂಗಳವಾರ ಮುಷ್ಕರ ನಡೆಸಲು ಕರೆ ನೀಡಿರುವ ಕಾರಣ ಕೆಲವು ಬ್ಯಾಂಕಿಂಗ್ ಸೇವೆಗಳಿಗೆ ಅಡ್ಡಿಯಾಗುವ ಸಾಧ್ಯತೆ ಇದೆ.
ಬ್ಯಾಂಕ್ ಶಾಖೆಗಳಗೆ ಹೋಗಿ ಠೇವಣಿ ಇರಿಸುವುದು, ಶಾಖೆಗಳಿಂದ ಹಣ ಹಿಂದಕ್ಕೆ ಪಡೆಯುವುದು, ಚೆಕ್ ಕ್ಲಿಯರೆನ್ಸ್ ಮತ್ತು ಸಾಲ ಮಂಜೂರಾತಿ ಸೇವೆಗಳಲ್ಲಿ ವ್ಯತ್ಯಯ ಆಗಬಹುದು ಎನ್ನಲಾಗಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಬ್ಯಾಂಕ್‌ಗಳ 10 ಲಕ್ಷ ನೌಕರರು ಹಾಗೂ ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಯುಎಫ್‌ಬಿಯು ಹೇಳಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.