ADVERTISEMENT

ಖಾಸಗೀಕರಣಕ್ಕೆ ವಿರೋಧ: ಎರಡು ದಿನ ಮುಷ್ಕರಕ್ಕೆ ಬ್ಯಾಂಕ್‌ ಒಕ್ಕೂಟಗಳ ಕರೆ

ಪಿಟಿಐ
Published 1 ಡಿಸೆಂಬರ್ 2021, 20:06 IST
Last Updated 1 ಡಿಸೆಂಬರ್ 2021, 20:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಪ್ರಸ್ತಾವವನ್ನು ವಿರೋಧಿಸಿಬ್ಯಾಂಕ್‌ ಸಂಘಟನೆಗಳ ಸಂಯುಕ್ತ ವೇದಿಕೆಯು (ಯುಎಫ್‌ಬಿಯು) ಡಿಸೆಂಬರ್‌ 16 ಮತ್ತು 17ರಂದು ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕೇಂದ್ರ ಬಜೆಟ್‌ನಲ್ಲಿ ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು.

ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಬ್ಯಾಂಕಿಂಗ್‌ ಕಾನೂನು ತಿದ್ದುಪಡಿ ಮಸೂದೆ 2021 ಮಂಡಿಸಲು ಕೇಂದ್ರ ಸರ್ಕಾರವು ಮುಂದಾಗಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಖಾಸಗೀಕರಣಕ್ಕೆ ವಿರೋಧ ವ್ಯಕ್ತಪಡಿಸಿಲು ಯುಎಫ್‌ಬಿಯು ನಿರ್ಧರಿಸಿದೆ ಎಂದು ಎಐಬಿಇಎ ಪ್ರಧಾನ ಕಾರ್ಯದರ್ಶಿ ಸಿ.ಎಚ್‌. ವೆಂಕಟಾಚಲಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.