ADVERTISEMENT

ಪಶ್ಚಿಮ ಬಂಗಾಳ: ಪೆಟ್ರೋಲ್‌, ಡೀಸೆಲ್ ಮೇಲಿನ ತೆರಿಗೆ ₹1 ಇಳಿಕೆ

ಪಿಟಿಐ
Published 21 ಫೆಬ್ರುವರಿ 2021, 13:45 IST
Last Updated 21 ಫೆಬ್ರುವರಿ 2021, 13:45 IST
ಸಾಂದರ್ಭಿಕ ಚಿತ್ರ 
ಸಾಂದರ್ಭಿಕ ಚಿತ್ರ    

ಕೋಲ್ಕತ್ತ: ಪಶ್ಚಿಮ ಬಂಗಾಳ ಸರ್ಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆಯಲ್ಲಿ ಲೀಟರ್‌ಗೆ ₹1 ಇಳಿಕೆ ಮಾಡಿದೆ. ಭಾನುವಾರ ಮಧ್ಯರಾತ್ರಿಯಿಂದ ಇದು ಜಾರಿಗೆ ಬಂದಿದೆ.

‘ತೈಲ ದರ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ನೆರವಾಗುವ ನಿಟ್ಟಿನಲ್ಲಿ ತೆರಿಗೆ ಇಳಿಕೆ ಮಾಡಲಾಗಿದೆ’ ಎಂದು ಪಶ್ಚಿಮ ಬಂಗಾಳ ಹಣಕಾಸು ಸಚಿವ ಅಮಿತ್ ಮಿತ್ರಾ ಹೇಳಿದ್ದಾರೆ.

‘ಕೇಂದ್ರ ಸರ್ಕಾರಕ್ಕೆ ಪ್ರತಿ ಲೀಟರ್‌ ಪೆಟ್ರೋಲ್‌ನಲ್ಲಿ ₹32.90 ಆದಾಯ ಲಭಿಸಿದರೆ, ರಾಜ್ಯ ಸರ್ಕಾರಕ್ಕೆ ₹18.46 ಲಭಿಸುತ್ತಿದೆ. ಪ್ರತಿ ಲೀಟರ್‌ ಡೀಸೆಲ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ₹ 31.80 ಹಾಗೂ ರಾಜ್ಯ ಸರ್ಕಾರಕ್ಕೆ ₹12.77 ಆದಾಯ ಲಭಿಸುತ್ತಿದೆ’ ಎಂದು ತಿಳಿಸಿದ್ದಾರೆ.

ADVERTISEMENT

‘ರಾಜ್ಯಗಳೊಂದಿಗಿನ ಅಧಿಕಾರ ಹಂಚಿಕೆಯನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರವು ಸೆಸ್‌ ವಿಧಿಸಿದೆ. ಇದು ಸಂಯುಕ್ತ ವ್ಯವಸ್ಥೆಯ ಆಶಯಕ್ಕೆ ವಿರುದ್ಧವಾಗಿದೆ’ ಎಂದೂ ಅವರು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.